

ಹಿರೇಕೆರೂರ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ತಾಲೂಕಿನ ಬಾಳಂಬೀಡ ಗ್ರಾಮದ ಬಿ.ಸಿ .ಪಾಟೀಲ ನಿವಾಸದ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಒಂದು ದಿನ ಸದಸ್ಯತ್ವ ಅಭಿಯಾನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನ ಪ್ರತಿನಿಧಿಗಳು ಕಾರ್ಯಕರ್ತರು, ಹಿತೈಷಿಗಳು 8800002024 ಕ್ಕೆ ಮಿಸ್ಡ್ ಕಾಲ್ ನೀಡಿ, ಬಿಜೆಪಿ ಸದಸ್ಯತ್ವ ಪಡೆಯಲು ತಿಳಿ ಹೇಳಬೇಕು. ಸೆ.4 ರಿಂದ 26 ರವರೆಗೆ, ಅ.1 ರಿಂದ 15ರವರೆಗೆ ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್, ಕ್ಯೂಆರ್ ಕೋಡ್ ಸ್ಕಾನ್ ಮೂಲಕ, ನಮೋ ಆಪ್ ಮೂಲಕ ನೋಂದಣಿ ಮಾಡಬಹುದು. ಅ.15 ರಿಂದ 30 ರವರೆಗೆ ಮನೆ-ಮನೆ ಭೇಟಿ ಮೂಲಕ ಸದಸ್ಯತ್ವ ಅಭಿಯಾನ ನಡೆಯಲಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 1,50,000 ಸಾವಿರ ಸದಸ್ಯತ್ವ ನೋಂದಾಯಿಸಬೇಕು. ಸದಸ್ಯತ್ವ ಅಭಿಯಾನದ ವೇಳೆ ರಾಜ್ಯ ಸರ್ಕಾರದ ದುರಾಡಳಿತ ಬಗ್ಗೆ ಸಾರ್ವಜನಿಕರಲ್ಲಿ ತಿಳಿ ಹೇಳಬೇಕು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ತಾಲೂಕು ಬಿಜೆಪಿ ಮಂಡಳದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಗವಿಸಿದ್ದಪ್ಪ ದ್ಯಾಮಣ್ಣವರ, ನಂಜುಂಡೇಶ್ವರ ಕಳ್ಳೇರ, ಎನ್.ಎಂ. ಈಟೇರ, ಬಿಜೆಪಿಯ ಎಲ್ಲ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು