ಸಾಮಾನ್ಯ ಕಾರ್ಯಕರ್ತರಿಗೂ ಪಕ್ಷದಲ್ಲಿ ಗೌರವ

ex minister
bjp membership campaign ex minister halappa achar
ಯಲಬುರ್ಗಾ ತಾಲೂಕಿನ ಮಸಬಹಂಚಿನಾಳ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತಾ ಅಭಿಯಾನ ನಡೆಯಿತು. ಮಾಜಿ ಸಚಿವ ಹಾಲಪ್ಪ ಆಚಾರ್​, ಬಿಜೆಪಿ ಜಿಲ್ಲಾದ್ಯಕ್ಷ ನವೀನ ಗುಳಗಣ್ಣವರ, ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಸದಸ್ಯತಾ ಅಭಿಯಾನದ ಸಂಚಾಲಕ ಈಶಪ್ಪ ಹಿರೇಮನಿ, ಪ್ರಧಾನ ಕಾರ್ಯದರ್ಶಿಗಳಾದ ಅಯ್ಯನಗೌಡ ಕೆಂಚಮ್ಮನವರ, ಅಮರೇಶ ಹುಬ್ಬಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂತೋಷಿಮಾ ಜೋಷಿ ಇದ್ದರು.
Published on

ಕೊಪ್ಪಳ: ಬಿಜೆಪಿ ವಿಶ್ವದಲ್ಲಿಯೇ ಅತೀ ಹೆಚ್ಚು ಕಾರ್ಯಕರ್ತರನ್ನು ಹೊಂದಿದ ದೊಡ್ಡ ಪಕ್ಷವಾಗಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್​ ಹೇಳಿದರು.

ಕುಕನೂರು ತಾಲೂಕಿನ ಮಸಬಹಂಚಿನಾಳ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತಾ ಅಭಿಯಾನ-2024 ಮಂಡಲ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತರಿಗೂ ಪಕ್ಷದಲ್ಲಿ ಗೌರವವಿದೆ. ಸಾಮಾಜಿಕ ನ್ಯಾಯ ನೀಡಲಾಗಿದೆ. ಸದಸ್ಯತ್ವ ಅಭಿಯಾನಕ್ಕೆ ವಾರ್ಡ್​ಗಳ ಪ್ರಮುಖರು, ಕಾರ್ಯಕರ್ತರು ಬೂತ್​ ಮಟ್ಟದಲ್ಲಿ ಸಹಕಾರ ನೀಡಬೇಕು. ಸದಸ್ಯತ್ವ ಅಭಿಯಾನದ ಮೂಲಕ ಪಕ್ಷ ಸಂಘಟಿಸಿ, ನಾಯಕತ್ವವನ್ನು ಬೆಳೆಸಬೇಕು. ಬೂತ್​ನಲ್ಲಿ ಪ್ರತಿ ಮನೆಗೆ ತಲುಪುವ ಮೂಲಕ ಲಕ್ಷಕ್ಕೂ ಅಧಿಕ ಸದಸ್ಯರನ್ನು ನೋಂದಾಯಿಸುವ ಮೂಲಕ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭ ಬಿಜೆಪಿ ಜಿಲ್ಲಾದ್ಯಕ್ಷ ನವೀನ ಗುಳಗಣ್ಣವರ, ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಸದಸ್ಯತಾ ಅಭಿಯಾನದ ಸಂಚಾಲಕ ಈಶಪ್ಪ ಹಿರೇಮನಿ, ಪ್ರಧಾನ ಕಾರ್ಯದರ್ಶಿಗಳಾದ ಅಯ್ಯನಗೌಡ ಕೆಂಚಮ್ಮನವರ, ಅಮರೇಶ ಹುಬ್ಬಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂತೋಷಿಮಾ ಜೋಷಿ ಮುಖಂಡರಾದ ಬಸಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ರತನ ದೇಸಾಯಿ, ಸಿ.ಎಚ್​.ಪಾಟೀಲ್​, ಶರಣಪ್ಪ ಈಳಿಗೇರ್​, ಶಂಕ್ರಪ್ಪ ಸುರಪುರ, ಶಿವಪ್ಪ ವಾದಿ, ಸೋಮನಗೌಡ ಪಾಟೀಲ್​, ಶರಣಪ್ಪ ಬಣ್ಣದಬಾವಿ ಸೇರಿದಂತೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net