ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

SDP SADASYA
Published on

ಸಿದ್ದಾಪುರ: ತಾಲೂಕಿನ ಬಿಳಗಿ ಮಾರಿಕಾಂಬಾ ದೇವಾಲಯದ ಆವರಣದಲ್ಲಿ ದೊಡ್ಮನೆ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸದಸ್ಯತ್ವ ಅಭಿಯಾನದ ಸಹ ಸಂಚಾಲಕ ಗುರುರಾಜ ಶಾನಭಾಗ ಅಭಿಯಾನದ ಕುರಿತು ಹಾಗೂ ತಾಲೂಕು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ತೋಟಪ್ಪ ನಾಯ್ಕ ಹೊಸೂರು ಸೇವಾ ಪಾಕ್ಷಿಕದ ಬಗ್ಗೆ ಮಾಹಿತಿ ನೀಡಿದರು.

ಬಿಳಗಿ ಗ್ರಾಪಂ ಅಧ್ಯಕ್ಷ ಮಹೇಶ ನಾಯ್ಕ, ಗ್ರಾಪಂ ಸದಸ್ಯ ಆದರ್ಶ ಪೈ, ರಂಜಿತಾ ಬಿಳಗಿ, ರಾಜು ನಾಯ್ಕ ಕ್ಯಾದಗಿ, ತಾಲೂಕು ಮಂಡಲದ ನಿಕಟಪೂರ್ವ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು, ಮಂಜುನಾಥ ಭಟ್, ಸುರೇಶ ನಾಯ್ಕ ಬಾಲಿಕೊಪ್ಪ, ಗಣಪತಿ ನಾಯ್ಕ ಕಸಗೋಡು, ಶಾಂತಕುಮಾರ ಭಟ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net