ರಾವಂದೂರಿನಲ್ಲಿ ಬಿಜೆಪಿ ಸದಸ್ಯತ್ವಕ್ಕೆ ಚಾಲನೆ

IMG-20241023-WA0003
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದಲ್ಲಿ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ತಾಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ ಚಾಲನೆ ನೀಡಿದರು.
Published on

ರಾವಂದೂರು: ಪಿರಿಯಾಪಟ್ಣಣ ತಾಲೂಕಿನ ರಾವಂದೂರು ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಲಾಯಿತು. ತಾಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ ಅಭಿಯಾನಕ್ಕೆ ಚಾಲನೆ ನೀಡಿದರು. ಕೇಂದ್ರ ಸರ್ಕಾರದ ಜನಪ್ರತಿನಿಧಿಗಳು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜನಪರ ಯೋಜನೆಗಳಿಂದಾಗಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಯುವಕರೇ ಸ್ವಯಂ ಪ್ರೇರಿತರಾಗಿ ಸದಸ್ಯತ್ವವನ್ನು ಪಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೂ ತೆರಳಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಆರ್.ಟಿ. ಸತೀಶ್, ಲೋಕಪಾಲಯ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನಬಸವರಾಜು, ರವಿ, ಹಮ್ಮಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ್, ನಾಗೇಶ್ ಹುಣಸವಾಡಿ,ವಿಶ್ವನಾಥ್ ಭೂತನಹಳ್ಳಿ, ತಾಲೂಕು ಉಪಾಧ್ಯಕ್ಷೆ ಗಾಯತ್ರಿ, ಶೈಲಜಾ ಮಂಜುನಾಥ್, ಸಂದೀಪ್ ಶೆಟ್ಟಿ, ಪ್ರಸನ್ನ, ಮೋಹನ್, ಸೂರ್ಯ ಮತ್ತು ನಂದನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net