

ಶಾಸಕ ಬಸವರಾಜ ಮತ್ತಿಮಡು ಸಲಹೆ | ಬಿಜೆಪಿ ಸದಸ್ಯತ್ವ ಅಭಿಯಾನ
ವಿಜಯವಾಣಿ ಸುದ್ದಿಜಾಲ ಕಲಬುರಗಿ
ದೇಶದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ಪ್ರತಿ ಮನೆ ಮನೆಗೂ ತಲುಪಿಸಿ, ಪಕ್ಷದ ಧ್ಯೇಯ ನಿಷ್ಠೆಗಳನ್ನು ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಗ್ರಾಮೀಣ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನದ ಕುರಿತ ಪೂರ್ವಭಾವಿ ಕಾರ್ಯಾಗಾರದಲ್ಲಿ ಮಾತನಾಡಿ, ಸಂಘಟನೆಗೆ ಕೆಲಸ ಮಾಡಬೇಕು. ಸದಸ್ಯತ್ವ ಅಭಿಯಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಯಶಸ್ವಿಗೊಳಿಸಬೇಕು. ಹೆಚ್ಚು, ಹೆಚ್ಚು ಜನರನ್ನು ಸದಸ್ಯರನ್ನಾಗಿ ಮಾಡಬೇಕು ಎಂದರು.
ಅಭಿಯಾನ ಸಂಚಾಲಕ ಅಮರನಾಥ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದೆÃವಾಡಗಿ, ವಿದ್ಯಾಸಾಗರ ಶಹಾಬಾದಿ, ಗ್ರಾಮೀಣ ಮಂಡಲ ಅಧ್ಯಕ್ಷ ಗಂಗಪ್ಪಗೌಡ ಪಾಟೀಲ್ ಬೋಧನ, ಶಹಾಬಾದ್ ಮಂಡಲ ಅಧ್ಯP್ಷÀ ನಿಂಗಣ್ಣ ಹುಳಗೋಳಕರ ಇತರರಿದ್ದರು.