ಬಿಜೆಪಿ ಶಾಸಕ ಎಚ್.ವಿಶ್ವನಾಥ್​ಗೆ ಬಾಗಿಲು ತೆರೆದ ಕಾಂಗ್ರೆಸ್!

vishwanath dks
Published on

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದರು.

ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿರುವ ವಿಶ್ವನಾಥ್ ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಭೇಟಿ ಮಾಡಿದ್ದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಯುವ ಕಾಂಗ್ರೆಸ್‌ನಲ್ಲಿ ನಾನೂ ವಿಶ್ವನಾಥ್ ಒಟ್ಟಿಗೆ ಕೆಲಸ ಮಾಡಿದ್ದೆವು. ಸಂಪುಟದಲ್ಲೂ ಕೆಲಸ ಮಾಡಿದ್ದೇವೆ. ಅವರು ಇಂಡಿಪೆಂಡೆಂಟ್ ಮ್ಯಾನ್ ಎಂದರು.

ನಮ್ಮ ಪ್ರಣಾಳಿಕೆ ಬಗ್ಗೆ ಮಾತನ್ನಾಡಿದ್ದೇವೆ. ಬಿಸಿಯೂಟ ಮೊದಲು ತಂದಿದ್ದೇ ವಿಶ್ವನಾಥ್ ಎಂದ ಅವರು, ರಾಜಕೀಯದ ಬಗ್ಗೆ ಏನೂ ಮಾತನಾಡಿಲ್ಲ, ಮುಂದೆ ಮಾತನಾಡೋಣ ಎಂದಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net