ಸೌಜನ್ಯಾ ಪ್ರಕರಣ ಮರು ತನಿಖೆ ಒತ್ತಾಯಿಸಿ ಕರಾವಳಿಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಭೇಟಿ

IMG-20230904-WA0208
Published on

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಮ್ಮ ಮನವಿಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net