ಬಿಜೆಪಿ ನಗರ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ

udp-31-bjp
Published on

ಉಡುಪಿ : ಮುಡಾ ಹಗರಣ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲೆಯಿಂದ 1250ಕ್ಕೂ ಅಧಿಕ ಕಾರ್ಯಕರ್ತರು ಹಾಗೂ 100ಕ್ಕೂ ಅಧಿಕ ಸ್ವಯಂಸೇವಕರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್​ ಕುಮಾರ್​ ಕುಂದಾಪುರ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಆ.7ರಂದು ಮಂಡ್ಯದಿಂದ ಮುಂದೆ 20 ಕಿಮೀ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಯಕರ್ತರಿಗೆ ಭಾಗವಹಿಸಲು ಅವಕಾಶ ಸಿಕ್ಕಿದೆ. ಹೀಗಾಗಿ ಆ.6ರಂದು ರಾತ್ರಿ ಮಂಡ್ಯಕ್ಕೆ ತೆರಳಬೇಕಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ 5 ಬಸ್​ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಚುನಾವಣೆ ನಡೆಸಲು ದುಡ್ಡಿಲ್ಲ
ಕಾಂಗ್ರೆಸ್​ ಸರ್ಕಾರದ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದೊಳಗೆ ಸಾವಿರಾರು ಕೋಟಿ ರೂ. ಹಗರಣ ನಡೆಸಿದೆ. ಸ್ವತ@ ಸಿಎಂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ ಪ್ರತಿಪಕ್ಷ ಬಿಜೆಪಿ ಜವಾಬ್ದಾರಿ ಹೆಚ್ಚಿದೆ. ಜಿಪಂ ಮತ್ತು ತಾಪಂಗಳಿಗೆ ಮೀಸಲಾತಿ ಪ್ರಕಟಿಸಿದರೂ ಚುನಾವಣೆ ನಡೆಸಲು ದುಡ್ಡಿಲ್ಲದೆ ಮುಂದೂಡುತ್ತಿದೆ ಎಂದು ಆರೋಪಿಸಿದರು.

ಶಾಸಕ ಯಶ್​ ಪಾಲ್​ ಸುವರ್ಣ ಮಾತನಾಡಿ, 14 ತಿಂಗಳಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಬಂದಿಲ್ಲ. 15 ತಿಂಗಳಿನಿಂದ ನಗರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲ. ಆಡಳಿತಾಧಿಕಾರಿ ಜಿಲ್ಲಾಧಿಕಾರಿಗಳು 5 ಬಾರಿ ಸಾಮಾನ್ಯ ಸಭೆಗೆ ದಿನ ನಿಗದಿ ಮಾಡಿ ಮುಂದೂಡಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ಉಡುಪಿ ನಗರಾಧ್ಯಕ್ಷ ದಿನೇಶ್​ ಅಮೀನ್​ ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಪ್ರಭಾರಿ ಉದಯ್​ ಕುಮಾರ್​ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್​ ಶೆಟ್ಟಿ, ಉಪಾಧ್ಯಕ್ಷ ಕಿರಣ್​ ಕುಮಾರ್​, ಎಸ್​ ಮೋರ್ಚಾ ರಾಜ್ಯ ಪ್ರ.ಕಾ. ದಿನಕರ ಬಾಬು ಉಪಸ್ಥಿತರಿದ್ದರು. ರಶ್ಮಿತಾ ಶೆಟ್ಟಿ ಸ್ವಾಗತಿಸಿ, ಜಗದೀಶ್​ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net