ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹುಬ್ಬಳ್ಳಿಗೆ ಇಂದು

JP NADDA NEW
Published on

ಹುಬ್ಬಳ್ಳಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಲೋಕಸಭೆ ಚುನಾವಣೆ ಪ್ರಚಾರಾರ್ಥ ಏ. 21ರಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

ಸಂಜೆ 4 ಗಂಟೆಗೆ ಹೋಟೆಲ್ ಡೆನಿಸನ್​ನಲ್ಲಿ ನಡ್ಡಾ ಅವರು ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ಚುನಾವಣೆ ಕುರಿತು ಮಾರ್ಗದರ್ಶನ ನೀಡುವರು.

ಸಂಜೆ 6ಕ್ಕೆ ಉಣಕಲ್ ಕ್ರಾಸ್ ಬಳಿಯ ಎಂ.ಆರ್. ಸಾಖರೆ ಶಾಲೆಯ ಮೈದಾನದಲ್ಲಿ ಚುನಾವಣೆ ಪ್ರಚಾರಾರ್ಥ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಪ್ರಮುಖರು, ಕಾರ್ಯಕರ್ತರು ಭಾಗವಹಿಸುವರು.

ರಾತ್ರಿ 9 ಗಂಟೆಗೆ ನಡ್ಡಾ ಅವರು ಹೊಟೆಲ್ ಡೆನಿಸನ್​ದಲ್ಲಿ ಧಾರವಾಡ ಕ್ಲಸ್ಟರ್​ನ ಲೋಕಸಭಾ ಕ್ಷೇತ್ರಗಳಾದ ಧಾರವಾಡ, ಹಾವೇರಿ ಮತ್ತು ದಾವಣಗೆರೆಯ ಬಿಜೆಪಿ ಕೋರ್ ಕಮಿಟಿ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಡ್ಡಾ ಅವರು ಚುನಾವಣಾ ಪ್ರಚಾರ ಕುರಿತ ವರದಿ ಪಡೆಯಲಿದ್ದಾರೆ ಎಂದು ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net