

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಗುರುವಾರ ನಾಮಪತ್ರ ಸಲ್ಲಿಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಯಶಪಾಲ್ ಸುವರ್ಣ, ಎಂಎಲ್‌ಸಿ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಕಿಶೋರ್ ಕುಂದಾಪುರ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.