

ಕಲಬುರಗಿ: ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬೆನ್ನಲ್ಲೆ ಬಿಜೆಪಿಯಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು, ಕಲಬುರಗಿ ಮಹಾನಗರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೂತನ ಆಯ್ಕೆ ಕುರಿತು ಶುಕ್ರವಾರ ಬಿಜೆಪಿ ವೀಕ್ಷಕ ಬೈರತಿ ಬಸವರಾಜ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ನಗರದ ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪದಾಧಿಕಾರಿಗಳು, ಹಿರಿಯ ಮುಖಂಡರೊAದಿಗೆ ಮಾತನಾಡಿ, ಅಭಿಪ್ರಾಯಗಳನ್ನು ಸಂಗ್ರಹಿಸಿದರು. ಪ್ರತಿಯೊಬ್ಬರೊಂದಿಗೆ ಪ್ರತ್ಯೇಕವಾಗಿ ಅಭಿಪ್ರಾಯ ಆಲಿಸಿದ ಬೈರತಿ ಬಸವರಾಜ, ಮಾಹಿತಿಯನ್ನು ಪಡೆದರು.
ಬಳ್ಳಾರಿ ವಿಭಾಗ ಉಸ್ತುವಾರಿ ಚಂದ್ರಶೇಖರ ಪಾಟೀಲ್, ಸಂಸದ ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶೀಲ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಮುಖಂಡ ಚಂದು ಪಾಟೀಲ್, ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ, ನಗರಾಧ್ಯಕ್ಷ ಸಿದ್ಧಾಜಿ ಪಾಟೀಲ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಪಾಟೀಲ್, ಮಹಾದೇವ ಬೆಳಮಗಿ, ಶಿವಯೋಗಿ ನಾಗನಳ್ಳಿ, ಉತ್ತರ ಅಧ್ಯಕ್ಷ ಅಶೋಕ ಮಾನಕರ್, ದಕ್ಷಿಣದ ರಾಮುರೆಡ್ಡಿ ಗುಮ್ಮಟ ಇತರರಿದ್ದರು.
ಇಂದು ಗ್ರಾಮೀಣ ಸಭೆ: ಕಲಬುರಗಿ ನಗರದ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿದ್ದರಾಜು ಜಿಲ್ಲೆಯ ಮುಖಂಡರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.