ಎಸ್​ಟಿ ಮುನ್ನಡೆ ಸಮಾವೇಶ

arunkumar hudali
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹು-ಧಾ ಮಹಾನಗರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಬಿಜೆಪಿ ಎಸ್​ಟಿ ಮೋರ್ಚಾ ವತಿಯಿಂದ ಏ. 13ರಂದು ಬೆಳಗ್ಗೆ 11 ಗಂಟೆಗೆ ನಗರ ಗೋಕುಲ ರಸ್ತೆ ಗೋಕುಲ ಗಾರ್ಡನ್​ನಲ್ಲಿ ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಪಂಗಡ (ಎಸ್​ಟಿ) ಮುನ್ನಡೆ ಸಮಾವೇಶ ಆಯೋಜಿಸಲಾಗಿದೆ ಎಂದು ಪಕ್ಷದ ಎಸ್​ಟಿ ಸಂಪರ್ಕ ಪ್ರಮುಖ ಅರುಣಕುಮಾರ ಹುದಲಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಎಂಎಲ್​ಸಿ ಪ್ರದೀಪ ಶೆಟ್ಟರ್, ಇತರರು ಪಾಲ್ಗೊಳ್ಳುವರು. ಎಸ್​ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತ ನೇತೃತ್ವ ವಹಿಸುವರು. ಸುಮಾರು 10 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಸ್​ಸಿ,ಎಸ್​ಟಿ ಸಮಾಜದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. 11,400 ಕೋಟಿ ರೂ. ಟಿಎಸ್​ಪಿ ಹಣವನ್ನು ಇತರೇ ಕೆಲಸಗಳಿಗೆ ವರ್ಗಾವಣೆ ಮಾಡಿದೆ. ವಿದ್ಯಾರ್ಥಿ ವೇತನ ಕೊಡುವುದನ್ನು ನಿಲ್ಲಿಸಿ ಬಿಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಸ್​ಟಿ ಸಮಾಜದವರು ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದತ್ತಮೂರ್ತಿ ಕುಲಕರ್ಣಿ, ಪುಂಡಲೀತ ತಳವಾರ, ಲಕ್ಷ್ಮಣ ಮೇಗಿನಮನಿ, ಮಣಿಕಂಠ ಶ್ಯಾಗೋಟಿ, ಅಶೋಕ ಸಾರೆಕೊಪ್ಪ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net