ಪ್ರಿಯಾಂಕ್ ಖರ್ಗೆ ಮನೆಗೆ ಶುಕ್ರವಾರ ಬಿಜೆಪಿ ಮುತ್ತಿಗೆ : ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

BJP
Published on

ಬಿ.ವೈ. ವಿಜಯೇಂದ್ರ, .ಅಶೋಕ್, ಚಲುವಾದಿ  ಸೇರಿ ಪಕ್ಷದ ಮುಖಂಡರು ಸೇರಿ ಅನೇಕರು ಭಾಗಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿರುವ ಸಚಿವರ ಮನೆಗೆ ಮುತ್ತಿಗೆ ಹಾಕಲಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬಿಜೆಪಿ ರಾಜ್ಯ ನಾಯಕರು ಸೇರಿ ಸುಮಾರು ೨೦ ಸಾವಿರ ಕಾರ್ಯಕರ್ತರು, ಕಲ್ಯಾಣ ಕರ್ನಾಟಕದ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ೨೦ ಕೆಎಸ್‌ಆರ್‌ಪಿ ತುಕಡಿ, ೧೫ ಸಿಆರ್ ತುಕಡಿ, ೧೦೦೦ ಪೊಲೀಸ್ ಸಿಬ್ಬಂದಿ, ೩೫ ಇನ್‌ಸ್ಪೆಕ್ಟರ್ ಸೇರಿ ನಗರದ ಎಸಿಪಿ, ಜಿಲ್ಲೆಯ ಡಿವೈಎಸ್‌ಪಿಗಳನ್ನು ಸಹ ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಗುರುವಾರ ಸಂಜೆಯಿAದಲೇ ಟೈಟ್ ಸೆಕ್ಯೂರಿಟಿ ಕೈಗೊಳ್ಳಲಾಗಿದೆ.

ವಿವಿಧ ಕಡೆಗಳಿಂದ ಆಗಮಿಸುವ ಕಾರ್ಯಕರ್ತರು ಜಗತ್ ವೃತ್ತದಲ್ಲಿ ಜಮಾಯಿಸಿ ಬೆಳಗ್ಗೆ ೧೦ಕ್ಕೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಸುವರು. ಬಳಿಕ ಐವಾನ್ -ಇ-ಶಾಹಿಯಲ್ಲಿರುವ ಸಚಿವ ಖರ್ಗೆ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದೆÃವಾಡಗಿ, ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ತಿಳಿಸಿದ್ದಾರೆ.

ಪಾಲ್ಗೊಳ್ಳುವ ಪ್ರಮುಖರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಮೇಲ್ಮನೆ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಮುಖರಾದ ಸಿ.ಟಿ. ರವಿ, ಮುರುಗೇಶ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ, ಪ್ರಭು ಚವ್ಹಾಣ್, ಶರಣು ಸಲಗರ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ. ರಾಷ್ಟಿçÃಯ ನಾಯಕರು ಸಹ ಆಗಮಿಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net