ಬಿಜೆಪಿಯಿಂದ ಜನರಿಗೆ ಆರ್ಥಿಕ ಹೊರೆ

04-03-Shiva-1
Published on

ರಾಯಚೂರು: ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಖಂಡಿಸಿ ಅಂಬೇಡ್ಕರ ವೃತ್ತದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಸಿಲಿಂಡರ್‌ಗಳನ್ನಿಟ್ಟು ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಸಿಲಿಂಡರ್ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಹೊರೆ ಉಂಟು ಮಾಡಿದೆ.

ಸರ್ಕಾರ ಏಕಾಏಕಿ ಗೃಹ ಬಳಕೆ ಸಿಲಿಂಡರ್ ದರವನ್ನು 50 ರೂ. ಹೆಚ್ಚಳ ಮಾಡಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುವಂತಾಗಿದೆ. ವಾಣಿಜ್ಯ ಬಳಕೆ ಸಿಲೆಂಡರ್ ದರವನ್ನು 350 ರೂ. ಹೆಚ್ಚಳ ಮಾಡಿರುವುದರಿಂದ ಹೋಟೆಲ್ ಸೇರಿ ಇತರ ವಸ್ತುಗಳ ದರದಲ್ಲಿಯೂ ಹೆಚ್ಚಳವಾಗಲಿದೆ.

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಬಡಜನರು ಜೀವನ ನಡೆಸಲು ಸಂಕಷ್ಟ ಎದುರಿಸುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭ್ರಷ್ಟ ಆಡಳಿತದಿಂದಾಗಿ ಮಹಿಳೆಯರು, ಕೂಲಿ ಕಾರ್ಮಿಕರು, ರೈತರು ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net