ಬಿಜೆಪಿ ತತ್ವ ಸಿದ್ಧಾಂತ ಒಪ್ಪುವವರಿಗೆ ಪಕ್ಷಕ್ಕೆ ಸ್ವಾಗತ

BJP, Philosophy, Party, Tumkos,
Published on

ಚನ್ನಗಿರಿ: ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಬರುವಂತವರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡಬೇಕಾಗಿದೆ ಎಂದು ತುಮ್‌ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ತಿಳಿಸಿದರು.

ಪಟ್ಟಣದ ಚನ್ನಮ್ಮಾಜಿ ಸಮುದಾಯ ಭವನದಲ್ಲಿ ಹೊನ್ನೆಬಾಗಿ ಜಿಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು.

ವಿಧಾನಸಭಾ ಚುನಾವಣೆಯಲ್ಲಿ ಹೊಂದಾಣಿಕೆಯ ರಾಜಕಾರಣ ಮತ್ತು ಭ್ರಷ್ಟಾಚಾರಿಗಳ ಹಣದ ಆಮಿಷದಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ.

ಮುಂದೆ ಬರಲಿರುವ ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಗೆ ಅಧಿಕ ಮತ ಕೊಡಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರನ್ನು ಹೆಚ್ಚು ಮತ ನೀಡುವ ಮೂಲಕ ಗೆಲ್ಲಿಸಿ ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕಾಗಿದೆ.

ಭಾರತ ಸದೃಢ ದೇಶವಾಗಬೇಕಾದರೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು ಎಂದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ಸದೃಢ ದೇಶದ ನಿರ್ಮಾಣಕ್ಕಾಗಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾಗಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಸಭೆಯಲ್ಲಿ ಉತ್ತರಪ್ರದೇಶದ ರಾಜ್ಯಸಭಾ ಸದಸ್ಯ ನರಸಿಂಹರಾವ್, ಚಂದ್ರಶೇಖರ್, ಮಾಚನಾಯನಹಳ್ಳಿ ಚಂದ್ರಶೇಖರ್, ಕಾಯಿ ಮಂಜುನಾಥ್, ಗಿರೀಶ್ ಹಾಗೂ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net