

ಪುತ್ತೂರು: ಕರಾವಳಿಯಲ್ಲಿ ಮರಳು ತೆಗೆಯದಿದ್ದರೆ ಸಮಸ್ಯೆಯಾಗುತ್ತದೆ. ಜನರಿಗೆ ಬೇಕಾದ ರೀತಿಯಲ್ಲಿ ಕಾನೂನು ತರಬೇಕು ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದರು.
ಕೆಂಪು ಕಲ್ಲು - ಮರಳು ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ವೈಫಲ್ಯ ಖಂಡಿಸಿ ಅಮರ್ ಜವಾನ್ ಸ್ಮಾರಕದ ಸಮೀಪ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲ ಆಯೋಜಿಸಿದ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಪುತ್ತೂರು ತಹಸೀಲ್ದಾರ ಮೂಲಕ ಮುಖ್ಯ ಮಂತ್ರಿಗಳಿಗೆ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು, ವರ್ತಕ ವಾಮನ್ ಪೈ ಅಭಿಪ್ರಾಯ ಹಂಚಿಕೊಂಡರು. ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದಿಂದ ಕಿಲ್ಲೆ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರ ಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಕಟ್ಟಡ ಕಾರ್ಮಿಕರ ಸಂಘ ಗೌರವಾಧ್ಯಕ್ಷ ಲೋಕೇಶ್ ಹೆಗ್ಡೆ, ಕೆಂಪು ಕಲ್ಲು ಉದ್ಯಮಿ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.
ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಸ್ವಾಗತಿಸಿದರು. ಉಮೇಶ್ ಕೊಡಿಬೈಲು ವಂದಿಸಿದರು. ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಮಿಕರಿಗೆ ಉದ್ಯೋಗವಿಲ್ಲದೆ, ಅಂಗಡಿಯವರಿಗೆ ವ್ಯಾಪಾರ ಇಲ್ಲದಂತಾಗಿದೆ. ಅಕ್ರಮಕ್ಕೆ ಬಿಜೆಪಿ ಯಾವತ್ತೂ ಬೆಂಬಲ ಸೂಚಿಸುವುದಿಲ್ಲ. ಸರ್ಕಾರ ಪರವಾನಗಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು. ದಾಖಲೆಗಳನ್ನು ಕಾಲಮಿತಿಯಲ್ಲಿ ಪರಿಶೀಲಿಸುವ ಕೆಲಸವನ್ನು ಅಽಕಾರಿಗಳು ಮಾಡಬೇಕು.
| ಪ್ರಸನ್ನ ಮಾರ್ತ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ