ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಮಹಾನಗರ ಜಿಲ್ಲೆಯ ಪ್ರತಿಯೊಂದು ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡುವ ಕಾರ್ಯಕ್ರಮವು ಶತಕ ತಲುಪಿದೆ.
ಹುಧಾ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರು, ಪೂರ್ವ ವಿಧಾನಸಭೆ ಕ್ಷೇತ್ರದ ಕರ್ಕಿ ಬಸವೇಶ್ವರ ನಗರದ ವಾರ್ಡ್ ನಂ. 69ರ ಬೂತ್ 157ರ ಅಧ್ಯಕ್ಷ ಶಿವು ತಾಳಿಕೋಟಿ ಅವರ ಮನೆಗೆ ಶನಿವಾರ ಭೇಟಿ ನೀಡಿದರು.
ಬೂತ್ ಅಧ್ಯಕ್ಷರ ಮನೆಯಲ್ಲಿ ಉಪಾಹಾರ ಸೇವಿಸಿದ ನಂತರ ಪದಾಧಿಕಾರಿಗಳು, ಪೇಜ್ ಪ್ರಮುಖರು ಹಾಗೂ ಹಿರಿಯ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಮಜ್ಜಗಿ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿವರಿಸಿದ ಅವರು, ಚುನಾವಣೆ ಸಂದರ್ಭದಲ್ಲಿ ಎಲ್ಲ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಬಿಜೆಪಿಗೆ ಅಧಿಕ ಮತಗಳು ಬರುವಂತೆ ಮನವೊಲಿಸಬೇಕೆಂದು ಹೇಳಿದರು.