ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಲಿ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಒತ್ತಾಯ

DSC_0161
Published on

ಮಂಡ್ಯ: ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೇಷರತ್ ಕ್ಷಮೆಯಾಚನೆ ಮಾಡಬೇಕೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಆಗ್ರಹಿಸಿದ್ದಾರೆ.

ಕನ್ನಡಿಗರು, ಸುಸಂಸ್ಕೃತರೂ ಆದ ಮಲ್ಲಿಕಾರ್ಜುನ ಖರ್ಗೆ ಅವರ ಬಾಯಲ್ಲಿ ಇಂತಹ ಅಪ್ರಬುದ್ಧ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಹಿರಿಯರಾದ ಖರ್ಗೆ ಅವರು ಸೋಲಿನ ಹತಾಶೆಯಿಂದ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ. ವಿಶ್ವವೇ ಒಪ್ಪಿರುವಂತಹ, ಯುವಜನರ ಕಣ್ಮಣಿಯಾಗಿರುವ ಪ್ರಧಾನಿ ನರೇಂದ್ರಮೋದಿ ಅವರ ಬಗ್ಗೆ ಎಲ್ಲ ವರ್ಗದ ಜನರೂ ಅಭಿನಂದಿಸಿ ಮಾತನಾಡುತ್ತಾರೆ. ಇಂತಹುದ್ದನ್ನು ಗಮನಿಸಿಯೂ ಬಾಲಿಶವಾಗಿ ಹೇಳಿಕೆ ನೀಡುವ ಮೂಲಕ ತಮ್ಮ ತನವನ್ನು ತೋರ್ಪಡಿಸಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಚುನಾವಣಾ ಕಾಲಘಟ್ಟದಲ್ಲಿ ನಾವಿರುವುದರಿಂದ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ದೇಶ ಕಟ್ಟುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡಬೇಕು. ಅದು ಬಿಟ್ಟು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಈಗಾಗಲೇ ಕೊನೆಯುಸಿಳೆಯುವ ಶಯ್ಯವಸ್ಥೆಯಲ್ಲಿದೆ. ಅದು ಉಸಿರುವ ನಿಲ್ಲಿಸುವ ಮುನ್ನ ಇಂತಹ ಲಘು ಹೇಳಿಕೆಗಳನ್ನು ನಿಲ್ಲಿಸಬೇಕು. ಈಗಾಗಲೇ ದೇಶದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ನಗರಸಭಾ ಸದಸ್ಯ ಎಂ.ಪಿ.ಅರುಣ್‌ಕುಮಾರ್, ಬಿಜೆಪಿ ಮಾಜಿ ನಗರಾಧ್ಯಕ್ಷ ಎಚ್.ಆರ್. ಅರವಿಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net