ಬಿಜೆಪಿ ಅಭಿನಂದನಾ ಸಮಾರಂಭ ಮುಂದೂಡಿಕೆ

gg
Published on



ಮಂಗಳೂರು : ಬಿಜೆಪಿ ನಾಯಕ ಭಾನುಪ್ರಕಾಶ್ ಅವರ ನಿಧನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಬೃಹತ್ ವಾಹನ ಜಾಥಾವನ್ನು ರದ್ದುಗೊಂಡಿತು.
ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ಅವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಚುನಾವಣಾ ಕ್ಲಸ್ಟರ್‌ನ ಸಂಚಾಲಕರಾಗಿ ದ.ಕ.ಜಿಲ್ಲೆಗೆ ನೇಮಕಗೊಂಡಿದ್ದರು. ಸಂಘದ ಶಿಸ್ತಿನ ಸ್ವಯಂ ಸೇವಕರಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸಿದ್ದ ಅವರ ಅಗಲುವಿಕೆಯಿಂದ ಪಕ್ಷ ಹಾಗೂ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ . ಅವರ ಗೌರವಾರ್ಥ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ನಡೆಯಬೇಕಿದ್ದ ಅಭಿನಂದನಾ ಸಮಾರಂಭವನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
,,,,,,,,,,,,,,,,,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net