

ಬಂಟ್ವಾಳ: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಶಾಸಕ ರಾಜೇಶ್ ನಾಯ್ಕ ಮಾತನಾಡಿ, ಬಡಜನರ ಕಲ್ಯಾಣ ಎನ್ನುವ ಮುಖವಾಡ ಹೊತ್ತುಕೊಂಡು ಬಡಜನರ ಮೇಲೆ ರಾಜ್ಯ ಸರ್ಕಾರ ಸವಾರಿ ಮಾಡುತ್ತಿದೆ. ಗ್ಯಾರಂಟಿ ಜಾರಿಗೊಳಿಸಲು ವಸ್ತುಗಳ ಬೆಲೆಯೇರಿಕೆ ಹಾಗೂ ತೆರಿಗೆ ಹೆಚ್ಚಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಕಿಯಾನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನಾ ಭಟ್, ಪೂಜಾ ಪೈ, ರಾಮದಾಸ ಬಂಟ್ವಾಳ, ದೇವಪ್ಪ ಪೂಜಾರಿ, ದೇವದಾಸ ಶೆಟ್ಟಿ, ಮಾಧವ ಮಾವೆ, ವಿಕಾಸ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ರವೀಶ್ ಶೆಟ್ಟಿ, ಡೊಂಬಯ ಅರಳ, ಗೋವಿಂದ ಪ್ರಭು, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಲಿಖಿತಾ ಶೆಟ್ಟಿ, ಮೋನಪ್ಪ ದೇವಸ್ಯ, ಸುರೇಶ್ ಕೋಟ್ಯಾನ್, ಪುರುಷೋತ್ತಮ ಸಾಲ್ಯಾನ್, ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ, ಪ್ರಭಾಕರ ಪ್ರಭು, ಆನಂದ ಶಂಭೂರು, ಮಚ್ಚೇಂದ್ರ ಸಾಲ್ಯಾನ್, ಶ್ರೀಧರ ಶೆಟ್ಟಿ ಪುಳಿಂಚ, ದಿನೇಶ್ ಭಂಡಾರಿ, ಕೇಶವ ದೈಪಲ, ಸೀಮಾ ಮಾಧವ, ಹರ್ಷಿಣಿ ಪುಷ್ಪಾನಂದ, ಪ್ರೇಮನಾಥ ಶೆಟ್ಟಿ ಅಂತರ, ಗೀತಾ ಚಂದ್ರಶೇಖರ್, ಚಿದಾನಂದ ರೈ ಕಕ್ಯ ಭಾಗವಹಿಸಿದ್ದರು.