ಕಡಬದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

protest
ಕಡಬದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
Published on

ಕಡಬ: ಬಿಜೆಪಿ ಸುಳ್ಯ ಮಂಡಲ ವತಿಯಿಂದ ಕಾರ್ಯಕರ್ತರು ಕಡಬ ಪೇಟೆಯ ಪಂಜ ಕ್ರಾಸ್ ಬಳಿ ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ಕೆಲಕಾಲ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ.ಆರ್., ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಸುಳ್ಯ ಮಂಡಲ ಕಾರ್ಯದರ್ಶಿಗಳಾದ ಶಿವಪ್ರಸಾದ್ ನಡುತೋಟ, ತೇಜಸ್ವಿನಿ ಕಟ್ಟಪುಣಿ, ಜಿಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಯುವಮೋರ್ಚಾ ಮಂಡಲ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್, ಕಡಬ ಶಕ್ತಿ ಕೇಂದ್ರದ ಕಾರ್ಯದರ್ಶಿ ಅಶೋಕ್, ಕೊಯಿಲ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ದೆಂತಾರು, ಹಿರಿಯರಾದ ಸತೀಶ್ ನಾಯಕ್ ಇದ್ದರು. ಸುಳ್ಯ ಮಂಡಲ ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಸ್ವಾಗತಿಸಿ, ನಿರೂಪಿಸಿದರು. ಕಾರ್ಯದರ್ಶಿ ವಿನಯ ಕಂದಡ್ಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net