ಬಡವರ ಜೀವನದಲ್ಲಿ ಕಾಂಗ್ರೆಸ್ ಚೆಲ್ಲಾಟ: ಶಾಸಕ ಹರೀಶ್ ಪೂಂಜ ಆರೋಪ

protest
ವಿವಿಧ ಬೇಡಿಕೆ ಈಡೇರಿಕೆಗೆ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆರಿಗೆ ಹೆಚ್ಚಿಸಿ ಜನತೆಗೆ ಬರೆ ಎಳೆದಿದೆ. ಹಾಲಿನ ದರ ಏರಿಕೆ ಮಾಡಿ ಬಡವರ ಜೀವನದ ಜತೆ ಆಡುವ ರಾಜ್ಯ ಸರ್ಕಾರದ ನಡೆ ಖಂಡನೀಯ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಅನೇಕ ಜನಪರ ಯೋಜನೆಗಳನ್ನು ರದ್ದುಮಾಡಿದ್ದು ರಾಜ್ಯದ ಜನತೆ ಜತೆಗೆ ಕಾಂಗ್ರೆಸ್ ಚೆಲ್ಲಾಟವಾಡುತ್ತಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಬಿಜೆಪಿ ಮತ್ತು ಜಿಲ್ಲಾ ರೈತ ಮೋರ್ಚಾದ ನೇತೃತ್ವದಲ್ಲಿ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಗೂ ಹಾಲಿನ ದರ ಏರಿಕೆ ವಿರುದ್ಧ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು. ಜಿಲ್ಲಾ ರೈತಮೋರ್ಚಾದ ಅಧ್ಯಕ್ಷ ಗಣೇಶ್ ನಾವೂರ ಪ್ರಸ್ತಾವನೆಗೈದರು.

ಮನಪಾ ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾದ ಮಂಜುಳಾ ರಾವ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಮುಖರಾದ ಗಣೇಶ್ ಪುತ್ರನ್, ಚೆನ್ನಪ್ಪ ಕೋಟ್ಯಾನ್, ಕುಶಾಲಪ್ಪ ಗೌಡ, ಹರಿಕೃಷ್ಣ ಬಂಟ್ವಾಳ, ಸೀತಾರಾಂ, ವಿಜಯ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್, ಯೋಗೀಶ್ ಗೌಡ, ದಿನೇಶ್, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಶಶಿಧರ್ ಕಲ್ಮಂಜ, ಜಿಲ್ಲೆಯ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸಹಿತ ಪ್ರಮುಖರು ಇದ್ದರು.

ಹಾಲಿಲ್ಲದ ಚಹಾ ವಿತರಣೆ

ಪ್ರತಿಭಟನೆ ಭಾಗವಾಗಿ ಬಿಜಿಪಿ ಕಾರ್ಯಕರ್ತೆಯರು ಹಾಲು ರಹಿತ ಚಹಾ ತಯಾರಿಸಿ ವಿತರಿಸಲಾಯಿತು. ಹಾಲಿನ ದರ ಏರಿಕೆ ರದ್ದುಗೊಳಿಸುವಂತೆ ಹಾಗೂ ಬಾಕಿಯಿರುವ ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೊಳಿಸುವಂತೆ ಬಿಜೆಪಿ ವತಿಯಿಂದ ಉಪತಹಸೀಲ್ದಾರ್ ರವಿಕುಮಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net