ವಕ್ಫ ಪ್ರಕರಣ ವಿರುದ್ಧ ನ.22 ರಂದು ಪ್ರತಿಭಟನೆ: ರಾಜು ಕುರುಡಗಿ

20GDG06
Published on

ವಿಜಯವಾಣಿ ಸುದ್ದಿಜಾಲ ಗದಗ

ನಗರದ ಗಾಂಧಿ ವೃತ್ತದಲ್ಲಿ ನ.22 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಕ್ಫ ಪ್ರಕರಣಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಮತ್ತು ವಕ್ಫದಿಂದ ಶೋಷಣೆಗೆ ಒಳಗಾದ ರೈತರಿಂದ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗು ಸಾರ್ವಜನಿಕ ಆಸ್ತಿಗಳನ್ನು ವಕ್ಫಗೆ ಸೇರಿಸಿದ್ದನ್ನು ವಿರೋಧಿಸಿ ಮತ್ತು ಸಂಜೆ ವರೆಗೆ ಮನವಿ ಸ್ವೀಕರಿಸಲಾಗುವುದು. ಪ್ರತಿಭಟನೆಯಲ್ಲಿ ಶಾಸಕ ಸಿ.ಸಿ. ಪಾಟೀಲ, ಎಸ್​.ವಿ. ಸಂಕನೂರು, ಕಳಕಪ್ಪ ಬಂಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

ಸಮಸ್ಯೆಯ ಗಂಭೀರತೆಯನ್ನು ಜಿಲ್ಲೆಯ ಎಲ್ಲ ತಾಲೂಕುವಾರು ಪರಾಮರ್ಶೆ ಮಾಡಲಾಗುವುದು. 3 ತಂಡಗಳನ್ನು ರಾಜ್ಯಾಧ್ಯರು ಈಗಾಗಲೇ ಪ್ರಕಟಿಸಿದ್ದಾರೆ. ಡಿಸೆಂಬರ್​ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಿಗೆ ರಾಜ್ಯಮಟ್ಟದ ಸಮಿತಿ ಸದಸ್ಯರು ಪ್ರವಾಸ ಮಾಡಲಿದ್ದಾರೆ. ರೈತರು, ಮಠ ಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ಥಾಪಿಸುತ್ತೇವೆ ಹಾಗು ನೈಜ ವರದಿಯನ್ನು ಸದನದಲ್ಲಿ ಚಚಿರ್ಸಲಾಗುತ್ತದೆ ಮತ್ತು ಡಿಸೆಂಬರ್​ನಲ್ಲಿ ಬೆಳಗಾವಿಯಲ್ಲಿ ರಾಜ್ಯಾಧ್ಯ ನೇತೃತ್ವದಲ್ಲಿ ಬೃಹತ್​ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net