

ಕುಶಾಲನಗರ:
ಕೊಡಗು ವಿಶ್ವವಿದ್ಯಾಲಯ ಮುಚ್ಚಲಾಗುವುದು, ವಿಲೀನಗೊಳಿಸಲಾಗುವುದು ಹೀಗೆ ಒಂದೊAದು ಹೇಳಿಕೆ ಕೊಡುವ ಮೂಲಕ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಆರೋಪಿಸಿದ್ದಾರೆ. ಕೊಡಗು ವಿವಿ ಉಳಿಸುವುದು ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳವಾರ ಇಲ್ಲಿ ಆಯೋಜಿಸದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಕೊಡಗು ವಿಶ್ವವಿದ್ಯಾಲಯ ರದ್ದುಗೊಳಿಸುವುದು ಅಥವಾ ವಿಲೀನಗೊಳಿಸುವ ಸÀರ್ಕಾರದ ಚಿಂತನೆಯ ಬಗ್ಗೆ ತಕ್ಷಣ ಮುಖ್ಯಮಂತ್ರಿ ಅಧಿಕೃತ ಹೇಳಿಕೆ ನೀಡುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮೂಡಿರುವ ಗೊಂದಲ ಈ ಕೂಡಲೇ ತಕ್ಷಣ ನಿವಾರಿಸಬೇಕಾಗಿದೆ.
ಬಜೆಟ್ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವವಿದ್ಯಾಲಯಗಳನ್ನು ವಿಲೀನಗೊಳಿಸುವ ಬಗ್ಗೆ ಹೇಳಿಕೆ ನೀಡಿರುವುದು ನಂತರ ಬೆಂಗಳೂರಿಗೆ ತೆರಳಿದ ನಿಯೋಗಕ್ಕೆ ಉತ್ತರಿಸಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅಪ್ಪಚ್ಚು ರಂಜನ್, ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ವಿವಿಯನ್ನು ಉಳಿಸುವ ಸಂಬAಧವಾಗಿ ಬಹಿರಂಗವಾಗಿ ಹೇಳಿಕೆ ನೀಡಬೇಕಾಗಿದೆ. ಕೊಡಗು ವಿವಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಮೂಲಕ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಲಾಗಿದೆ.
ಬಿಜೆಪಿ ಸÀರ್ಕಾರದ ಅವಧಿಯಲ್ಲಿ ಕೊಡಗು ವಿವಿ ನಿರ್ಮಾಣಗೊಂಡಿದ್ದು ಕಾಂಗ್ರೆಸ್ ಸರ್ಕಾರ ಇದುವರೆಗೆ ಚಿಕ್ಕಾಸು ಅನುದಾನ ಬಿಡುಗಡೆಗೊಳಿಸಿಲ್ಲ. ತಮ್ಮ ಸÀರ್ಕಾರದ ಅವಧಿಯಲ್ಲಿ ಕೊಡಗು ವಿವಿ ಅಭಿವೃದ್ಧಿ ಸಲುವಾಗಿ ಎರಡು ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಈ ಸಂಬAಧ ಜಿಲ್ಲೆಯಿಂದ ರಾಜ್ಯಪಾಲರ ಬಳಿ ನಿಯೋಗ ತೆರಳಿ ಕೊಡಗು ವಿವಿಯನ್ನು ಉಳಿಸಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಗಮನ ಸೆಳೆಯಲಾಗುವುದು. ಕೊಡಗು ವಿವಿಯನ್ನು ಉಳಿಸುವ ನಿಟ್ಟಿನಲ್ಲಿ ನ್ಯಾಯಾಲಯದ ಮೊರೆಯನ್ನೂ ಹೋಗುವುದಾಗಿ ಎಂದರು.
ಕೊಡಗು ವಿವಿ ರದ್ದುಪಡಿಸಲು ಹೊರಟಿರುವುದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಹಣ ದುರುಪಯೋಗ, ಸಿ ಮತ್ತು ಡಿ ಜಾಗವನ್ನು ಅರಣ್ಯೀಕರಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಗಳು ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಈ ಎಲ್ಲ ನೀತಿಗಳ ವಿರುದ್ಧ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಅಪ್ಪಚ್ಚು ರಂಜನ್ ಸÀರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸÀರ್ಕಾರದ ಈ ಎಲ್ಲಾ ಚಿಂತನೆಗಳನ್ನು ಖಂಡಿಸಿ ಸದ್ಯದಲ್ಲಿಯೇ ಕೊಡಗು ಬಂದ್ ಮಾಡುವ ಎಚ್ಚರಿಕೆ ನೀಡಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪ್ರಗತಿ ಪಥದಲ್ಲಿರುವ ಕೊಡಗು ವಿವಿಯನ್ನು ಉಳಿಸುವ ನಿಟ್ಟಿನಲ್ಲಿ ಸÀರ್ಕಾರದ ಪ್ರತಿನಿಧಿಗಳು ಅನಾವಶ್ಯಕ ಹೇಳಿಕೆ ನೀಡಿ ಗೊಂದಲ ಉಂಟು ಮಾಡುತ್ತಿದ್ದಾರೆ. ಅಧಿಕೃತ ಹೇಳಿಕೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಪತ್ರಿಕೆಗಳು, ಮಾಧ್ಯಮಗಳ ಮೂಲಕ ಮಾಹಿತಿ ನೀಡಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿ ತಂದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುವುದೇ ಸÀರ್ಕಾರದ ಷಡ್ಯಂತ್ರ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಜಿಲ್ಲೆಯ ಪ್ರಸಕ್ತ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಇಲ್ಲದಿದ್ದರೆ ಕೊಡಗು ಬಂದ್ ನಿಶ್ಚಿತ ಎಂದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಮಾತನಾಡಿದರು.
ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್, ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಕುಶಾಲನಗರ ಮಂಡಲ ಅಧ್ಯಕ್ಷ ಎಂ.ಎA. ಚರಣ್, ಕಾರ್ಯದರ್ಶಿ ಮಧುಸೂದನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಪದಾಧಿಕಾರಿಗಳು, ತಾಲೂಕು ಮಟ್ಟದ ಪ್ರಮುಖರು, ಕಾರ್ಯಕರ್ತರು, ಮಹಿಳಾ ಮೋರ್ಚಾ ಪ್ರಮುಖರು ಇದ್ದರು.