

ಹುಬ್ಬಳ್ಳಿ: ಆರ್ ಸಿ ಬಿ ಅಭಿನಂದನಾ ಸಮಾರಂಭ ನಿರ್ವಹಣೆ ಮಾಡುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಲ್ಲಿಯ ಬಿಜೆಪಿ ಸೆಂಟ್ರಲ್ ಕ್ಷೇತ್ರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಶುಕ್ರವಾರ ನಗರದ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರ, ಸಿಎಂ, ಡಿಸಿಎಂ ವಿರುದ್ಧ ಧಿಕ್ಕಾರ ಕೂಗಿದರು. ಅವರ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟೆಂಗಿನಕಾಯಿ, ಆರ್ ಸಿ ಬಿ ಅಭಿನಂದನಾ ಸಮಾರಂಭ ವೇಳೆ ಕಾಲ್ತುಳಿತಕ್ಕೆ 11 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಪರಮೇಶ್ವರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಘಟನೆ ನಂತರ ಅಮಾಯಕ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದರ ಮೂಲಕ ಸರ್ಕಾರ ತನ್ನ ತಪ್ಪನ್ನು ಮರೆಮಾಚಿ ಪೊಲೀಸ್ ಇಲಾಖೆ ಹಾಗೂ ಕೆಎಸ್ಸಿಎ ಮೇಲೆ ಪ್ರಕರಣ ದಾಖಲಿಸುತ್ತಿದೆ. ಇದು ತಪ್ಪು. ಲಜ್ಜೆಗೆಟ್ಟ ಸರ್ಕಾರದ ಮೇಲೆಯೇ ಪ್ರಕರಣ ದಾಖಲಿಸಬೇಕು ಎಂದರು.
ಪ್ರತಿಭಟನೆಯಲ್ಲಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಾಜು ಕಾಳೆ, ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ಜಿಲ್ಲಾ ವಕ್ತಾರ ರವಿ ನಾಯಕ, ಪ್ರಕಾಶ ಕ್ಯಾರಕಟ್ಟಿ, ಕೃಷ್ಣ ಗಂಡಗಾಳೇಕರ, ರಾಮನಗೌಡ್ರ ಶೆಟ್ಟನಗೌಡ್ರ, ಪ್ರವಿಣ ಪವಾರ, ತೋಟಪ್ಪ ನಿಡಗುಂದಿ, ಅಶೋಕ ವಾಲ್ಮೀಕಿ, ಪ್ರವಿಣ ಹುರಳಿ, ಸುನೀಲ ದಳವಿ, ಕಿಶನ್ ಬಿಲಾನ, ಶಿವಾನಂದ ಗಚ್ಚೇನವರ, ಅಕ್ಕಮ್ಮ ಹೆಗಡೆ, ಚೇತನ್ ಕಲಾಲ, ಇಂದಿರಾ ಚೌಹಾಣ, ಸುಮಾ ಶಿವನಗೌಡ, ಡಿ. ರಘು ಮೊದಲಾದವರು ಉಪಸ್ಥಿತರಿದ್ದರು.