ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

23 Dwd 1
Published on

ಧಾರವಾಡ: ಕಾಂಗ್ರೆಸ್ ಸರ್ಕಾರ ದಲಿತ ವಿರೋಽ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ ಬಿಜೆಪಿ ಘಟಕದಿಂದ ನಗರದ ಜಿಲ್ಲಾಽಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಮುದ್ರಾ ಯೋಜನೆಯಲ್ಲಿ ದಲಿತರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ದಲಿತ ಉದ್ಯಮದಾರರನ್ನು ರೂಪಿಸಲು ಆಸಕ್ತಿ ವಹಿಸಿಲ್ಲ. ಅಲ್ಲದೆ, ಬಜೆಟ್‌ನಲ್ಲೂ ಯಾವುದೇ ಕಾರ್ಯಕ್ರಮ ಘೋಷಿಸಿಲ್ಲ. ಗ್ಯಾರಂಟಿಗೆ ಹಣ ಹೊಂದಿಸಲು ಬಜೆಟ್‌ನಲ್ಲಿ ೧೧ ಸಾವಿರ ಕೋಟಿ ರೂಪಾಯಿ ಅನುದಾನವನ್ನು ಕಡಿತ ಮಾಡಲಾಗಿದೆ. ಸಂವಿಧಾನ ಜಾಥಾ ಮÁಡುತ್ತಿರುವ ಸರ್ಕಾರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ದಲಿತರಿಗೆ ಸೇರಬೇಕಾದ ಅನುದಾನವನ್ನು ನಿರಾಕರಿಸಿ ಅನ್ಯಾಯ ಮÁಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮುಖಂಡರಾದ ಈರೇಶ ಅಂಚಟಗೇರಿ, ಮಹೇಂದ್ರ ಕೌತಾಳ, ವಿಜಯÁನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ, ರಾಜು ಕೋಟೆನವರ, ಬಸವರಾಜ, ಗರಗ ಸುನೀಲ ಮೋರೆ, ರುದ್ರಪ್ಪ ಅರಿವಾಳ, ಶ್ರೀನಿವಾಸ ಕೋಟ್ಯಾನ, ಹರೀಶ ಬಿಜಾಪುರ, ಬಸು ಬಾಳಗಿ, ಮೋಹನ ರಾಮದುರ್ಗ, ಜ್ಯೋತಿ ಪಾಟೀಲ, ಅಮಿತ ಪಾಟೀಲ ಹಾಗೂ ಎಸ್‌ಸಿ ಮೋರ್ಚಾ ಪದಾಽಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net