

ಕಾರವಾರ: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರಮುಖರು ಜಿಲ್ಲೆಯಾದ್ಯಂತ ಎಲ್ಲ ತಾಲೂಕು ಕೇಂದ್ರಗಳಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಕಾರವಾರದ ನೇತಾಜಿ ಸುಭಾಷ್ ಸರ್ಕಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗರು ದಿಕ್ಕಾರ ಕೂಗಿದರು. ¨ಏರಿಸಿದ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.
ಎನ್.ಎಸ್.ಹೆಗಡೆ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಇತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಲಿದೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಡ ಮಧ್ಯಮ ವರ್ಗದ ಜನರಿಗೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಕಷ್ಟ ಎದುರಾಗಿದೆ. ಗ್ಯಾರಂಟಿ ಯೋಜನೆಯ ಹಣ ಹೊಂದಿಸುವ ಸಲುವಾಗಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆಗೆ ಮಾಡಿದೆ ಎಂದು ಆರೋಪಿಸಿದರು.
ನಾಗರಾಜ ನಾಯಕ, ಡಾ.ನಿತಿನ್ ಪಿಕಳೆ, ನಾಗೇಶ ಕುರ್ಡೇಕರ್, ಸುಭಾಷ ಗುನಗಿ, ಮಾಲಾ ಹುಲಸ್ವಾರ್ ಇತರರು ಮಾತನಾಡಿದರು.