ಸರ್ಕಾರದ ವಿರುದ್ಧ ಚಿಕ್ಕೋಡಿಯಲ್ಲಿ ಬಿಜೆಪಿ ಪ್ರತಿಭಟನೆ

14
ಚಿಕ್ಕೋಡಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ನೇತೃತ್ವದಲ್ಲಿ ಗ್ರೇಡ್-2 ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸತೀಶ ಅಪ್ಪಾಜಿಗೋಳ, ಮಹೇಶ ಭಾತೆ, ನಿಂಗಪ್ಪ ಕೋಕಲೆ, ರಮೇಶ ಖೇತಗೌಡರ, ಶಾಂಭವಿ ಅಶ್ವತ್ಥಪುರ, ಶಕುಂತಲಾ ಡೊಣವಾಡೆ, ಆಶಾರಾಣಿ ಪಾಟೀಲ ಇತರರು ಇದ್ದರು.
Published on

ಚಿಕ್ಕೋಡಿ: ರಾಜ್ಯಾದ್ಯಂತ ರಾಮಭಕ್ತರ ಮೇಲೆ ಪೊಲೀಸ್ ಇಲಾಖೆಯಿಂದ ದೌರ್ಜನ್ಯ ಆಗುತ್ತಿದೆ ಎಂದು ಆರೋಪಿಸಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಬಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಮೂಲಕ ರಾಜ್ಯಪಾಲರಿಗೆ ಬುಧವಾರ ಮನವಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿ, ರಾಜ್ಯಾದ್ಯಂತ ರಾಮಭಕ್ತರು ಮತ್ತು ಕರಸೇವಕರ ಮೇಲೆ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ದೌರ್ಜನ್ಯ ಹಾಗೂ ಹುಬ್ಬಳ್ಳಿ ನಗರದ ಹಿಂದು ಕಾರ್ಯಕರ್ತ ಶ್ರೀಕಾಂತ ಪೂಜೇರಿ ಮೇಲೆ ಸುಳ್ಳು ಕೇಸ್ ದಾಖಲಿಸಿ ಬಂಧಿಸಿರುವುದು ಖಂಡನೀಯ. ರಾಜ್ಯ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿರುವ ಪೊಲೀಸರು ದಬ್ಬಾಳಿಕೆ ನಿಲ್ಲಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಮಹೇಶ ಭಾತೆ, ನಿಂಗಪ್ಪ ಕೋಕಲೆ,ರಮೇಶ ಖೇತಗೌಡರ, ಶಿವಾನಂದ ನವಲಿಹಾಳೆ, ವಿಜಯ ಕೋಟಿವಾಲೆ, ತಮ್ಮಣ್ಣ ಪಾರಶೆಟ್ಟಿ, ಸಂಜಯ ಪಾಟೀಲ, ಬಸವರಾಜ ಡೊಣವಾಡೆ, ಅಪ್ಪಾಸಾಹೇಬ ಚೌಗಲೆ, ರಾಜು ಹರಗನ್ನವರ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತ್ಥಪುರ, ಚಿಕ್ಕೋಡಿ ಮಂಡಳ ಅಧ್ಯಕ್ಷ ಶಕುಂತಲಾ ಡೊಣವಾಡೆ, ಆಶಾರಾಣಿ ಪಾಟೀಲ, ಸುವರ್ಣಾ ಹಂಪಣ್ಣವರ, ಸುನೀತಾ ಅಪ್ಪಾಜಿಗೋಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net