ಬಳ್ಳಾರಿ : ಇಲ್ಲಿನ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಜಿಲ್ಲೆಯ ಬಾಣಂತಿಯರ ಸರಣಿ ಸಾವು ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಬಿಜೆಪಿ ಉಪವಾಸ ಸತ್ಯಾಗ್ರಹ ಶನಿವಾರ ನಡೆಸಿತು.
ಬಳಿಕ ಬಿ.ಶ್ರೀರಾಮುಲು ಮಾತನಾಡಿ, ನಿಷೇಧಕ್ಕೆ ಒಳಪಟ್ಟಿದ್ದ ಐವಿ ದ್ರಾವಣವನ್ನು ರಾಜ್ಯ ಸರ್ಕಾರ ಏಕೆ ಬಳಸಿದೆ ಎಂದು ಪ್ರಶ್ನಿಸಿದರು. ಸರ್ಕಾರ ಯಾರೊಬ್ಬ ಅಧಿಕಾರಿಯನ್ನು ಅಮಾನತು ಮಾಡಿ ಲಕ್ಷ ಪರಿಹಾರ ನೀಡಿದರೆ ಸುಮ್ಮನೆ ಕೂರುವುದಿಲ್ಲ. ಈ ಸಾವಿಗೆ ಕಾರಣರಾದವರ ಮೇಲೆ ಕ್ರಮ ಜರುಗಿಸಬೇಕು. ಮೃತ ಕುಟುಂಬಗಳಿಗೆ ಒಂದು ಕೋಟಿ ರೂ. ಪರಿಹಾರ ನೀಡಿ ನ್ಯಾಯ ದೊರಕಿಸಬೇಕು. ಅಲ್ಲಿಯವರೆಗೆ ಈ ಹೋರಾಟ ನಿಲ್ಲಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಬೆಳಗಾವಿ ಆಧಿವೇಶನ ಹಿನ್ನಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ಎಂದು ಅಕ್ರೋಶಗೊಂಡರು.