

ಹುಬ್ಬಳ್ಳಿ : ಡೀಸೆಲ್ ಬೆಲೆ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಗೋಕುಲ ರಸ್ತೆಯ ಅಕ್ಷಯ ಗಾರ್ಡನ್ನ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರದ ನಿರ್ಧಾರಗಳಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ದೂರಿದರು.
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಕೆ ಮಾಡಲು ಸರ್ಕಾರ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವ ನೆಪದಲ್ಲಿ ಅವರ ಜೀವನಕ್ಕೆ ಬರೆ ಹಾಕುತ್ತಿದೆ ಎಂದು ಆರೋಪಿಸಿದರು.
ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ವಕ್ಫ ಕಾಯ್ದೆ ಮಂಡನೆಯಾಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಇದೇ ಸಂದರ್ಭದಲ್ಲಿ ವಿಜಯೋತ್ಸವ ನಡೆಸಿದರು.
ಹು-ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಾಜು ಕಾಳೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ವಿಜಯೋತ್ಸವದಲ್ಲಿ ಲಿಂಗರಾಜ ಪಾಟೀಲ, ದತ್ತಮೂತಿರ್ ಕುಲಕಣಿರ್, ರವಿ ನಾಯಕ, ಸಿದ್ದು ಮುಗಲಿಶೆಟ್ಟರ, ಬೀರಪ್ಪ ಖಂಡೆಕರ, ಅಶೋಕ ವಾಲ್ಮೀಕಿ, ಕೃಷ್ಣಾ ಗಂಡಗಾಳೇಕರ, ಉಮೇಶ ಕೌಜಗೇರಿ, ಈಶ್ವರಗೌಡ ಪಾಟೀಲ, ತೋಟಪ್ಪ ನಿಡಗುಂದಿ, ವೀಣಾ ಬರದ್ವಾಡ, ರೂಪಾ ಶೆಟ್ಟಿ, ಉಮಾ ಮುಕುಂದ, ಅಕ್ಕಮಹಾದೇವಿ ಹೆಗಡೆ, ಪ್ರವಿಣ ಪವಾರ, ಸಂಗೀತಾ ಬದ್ದಿ ಹಾಗೂ ಇತರರು ಪಾಲ್ಗೊಂಡಿದ್ದರು.