ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ

22HPT 2
ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸಪೇಟೆಯ ಪುನೀತ್ ರಾಜ್‌ಕುಮಾರ್ ಸರ್ಕಲ್‌ನಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಹೊಸಪೇಟೆ: ರೈತರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿದೆ. ಈ ಮೂಲ ರೈತರನ್ನು ಮತ್ತೆ ದಲ್ಲಾಳಿಗಳ ಕೂಪಕ್ಕೆ ತಳ್ಳಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಗೋಳಿ ಕೊಟ್ರೇಶಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರ ಅಮಾನತುಗೊಳಿಸಿರುವ ಸ್ಪೀಕರ್ ನಡೆಯನ್ನು ಖಂಡಿಸಿ ಬಿಜೆಪಿ ಕಾರ್ಯರ್ತರು ಶನಿವಾರ ಪುನೀತ್ ರಾಜ್‌ಕುಮಾರ್ ಸರ್ಕಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆಗಳಿಂದ ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆಗಳನ್ನು ತಂದುಕೊಡುತ್ತಿದ್ದವು. ಮರಾಟದ ಸ್ವತಂತ್ರö್ಯ, ಮುಕ್ತ ಮಾರುಕಟ್ಟೆ ಕಲ್ಪಿಸಿದ್ದವು. ಅದರ ಮೂಲ ತಿರುಳು ಅರಿಯ ಕಾಂಗ್ರೆಸ್ ನಾಯಕರು ವಿನಾಕಾರಣ ಟೀಕಿಸುತ್ತಿದ್ದರು. ಆದರೆ, ತಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮೂರು ರದ್ದುಗೊಳಿಸುವ ರಾಜಕೀಯ ದ್ವೇಷಸಾಧಿಸಿದೆ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಮಾತನಾಡಿ, ಕೇವಲ ಬಿಟ್ಟಿ ಭಾಗ್ಯಗಳ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಪ್ರತಿಭಟನೆ ಎಂಬುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ, ಪ್ರತಿಭಟನೆ ನಡೆಸಿದ್ದಾರೆ ಎಂಬ ಏಕೈಕ ಕಾರಣಕ್ಕೆ ಸದನದಿಂದ ಅಮಾನತು ಮಾಡಿರುವದು ಸರ್ಕಾರಕ್ಕೆ ಶೋಭೆಯಲ್ಲ ಎಂದರು.

ಬಿಜೆಪಿ ಪ್ರಮುಖರಾದ ಸಾಲಿ ಸಿದ್ದಯ್ಯಸ್ವಾಮಿ ಮಾತನಾಡಿ, ಐದು ಗ್ಯಾರೆಂಟಿಗಳ ಮೂಲಕ ಅಧಿಕಾರಕ್ಕೆ ಕಾಂಗ್ರೆಸ್, ೧೦ ಕೆಜಿ ಕೊಡಲು ಹೆಣಗಾಡುತ್ತಿದೆ. ಕೇಂದ್ರ ಸರ್ಕಾರದಿಂದ ದೊರೆಯುವ ಐದು ಕೇಜಿ ಅಕ್ಕಿಯನ್ನೇ ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದ ಕಾಂಗ್ರೆಸ್ ಬಣ್ಣ ಈಗ ಬಯಲಾಗಿದೆ. ಹೀಗಾಗಿ ಒಂದು ವರ್ಷ ಪೂರೈಸುವುದರ ಒಳಗೆ ಪತನವಾಗುತ್ತದೆ ಎಂದು ಹೇಳಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಗೋಳಿ ಕೊಟ್ರೇಶಪ್ಪ, ಜಿಲ್ಲಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಪ್ರಭಾರಿ ಪೂಜಪ್ಪ, ವಿವಿಧ ಮಂಡಲಧ್ಯಕ್ಷರಾದ ಕಾಸೆಟ್ಟಿ ಉಮಾಪತಿ, ಸಂಜೀವರೆಡ್ಡಿ, ವೀರಯ್ಯಸ್ವಾಮಿ, ಜಿಲ್ಲಾಮಾಧ್ಯಮ ಪ್ರಭಾರಿ ಸತ್ಯನಾರಾಯಣ, ಪ್ರಮುಖರಾದ ಮಲ್ಲಿಕಾರ್ಜುನ, ಕೆ.ಎಸ್.ರಾಘವೇಂದ್ರ, ಶಂಕರ ಮೇಟಿ, ಸುಮಾ, ರೇಣುಕಮ್ಮ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net