

ಮಂಗಳೂರಿನಲ್ಲಿ ನಡೆದ ಭಜರಂಗದಳ ಮತ್ತು ಹಿಂದು ಪರ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ನಗರದ ರಾಮಸ್ವಾಮಿ ಸರ್ಕಲ್ನಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು.
ಪಹಲ್ಗಾಮ್ ಘಟನೆಯಲ್ಲಿ ಹಿಂದುಗಳ ಹತ್ಯೆ ಮಾಡಿದ ಉಗ್ರರ ಮನೆಗಳನ್ನು ಧ್ವಂಸ ಮಾಡಿದ ರೀತಿ ಕಿಡಿಗೇಡಿಗಳ ಮೇಲೂ ರಾಜ್ಯ ಸರ್ಕಾರ ಕಠಿಣ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ, ಆತ ಜಾಮೀನಿನ ಮೇಲೆ ಹೊರಗಿದ್ದ ಎಂಬ ಪೊಲೀಸ್ ಕಮಿಷನರ್ ಹೇಳಿಕೆ ಖಂಡಿನೀಯವಾಗಿದೆ. ಬೇಲ್ ಮೇಲೆ ಹೊರಗಿದ್ದ ಕಾರಣಕ್ಕೆ ಆತನ ಕೊಲೆ ಮಾಡಬೇಕಾ? ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಹಂತಕರಿಗೆ ರಕ್ಷಣೆ ಸಿಗುತ್ತದೆ ಎಂದು ದೂರಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಮುಖಂಡರಾದ ಅನಿಲ್ ಥಾಮಸ್, ಬಿ.ವಿ.ಮಂಜುನಾಥ್, ಜೋಗಿ ಮಂಜು ಇತರರಿದ್ದರು.