ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

BJP STRIKE
Published on

ಧಾರವಾಡ: ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಳೆದ 2 ತಿಂಗಳಲ್ಲಿ ರಾಜ್ಯದಲ್ಲಿ 46 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಬೆಲೆ ಏರಿಕೆ ವಿಪರೀತವಾಗಿದ್ದು, ನಿಯಂತ್ರಿಸುವಲ್ಲಿ ಸರ್ಕಾರ ವಿಲವಾಗಿದೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಹೋರಾಟವನ್ನು ಬಗ್ಗುಬಡಿಯಲು ಸದನದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸಿ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಲಾಗಿದೆ. ಚರ್ಚೆ ಇಲ್ಲದೆ 5 ಬಿಲ್‌ಗಳನ್ನು ಪಾಸು ಮಾಡಲಾಗಿದೆ. ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದು, ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ, ಪದಾಧಿಕಾರಿಗಳಾದ ಸಂಜಯ ಕಪಟಕರ, ಬಸವರಾಜ ಕುಂದಗೋಳಮಠ, ಈರೇಶ ಅಂಚಟಗೇರಿ, ಶಿವು ಹಿರೇಮಠ, ಸುರೇಶ ಬೇದರೆ, ಮೋಹನ ರಾಮದುರ್ಗ, ಶ್ರೀನಿವಾಸ ಕೋಟ್ಯಾನ್, ಬಸವರಾಜ ಗರಗ, ಜಯತೀರ್ಥ ಕಟ್ಟಿ, ಜ್ಯೋತಿ ಪಾಟೀಲ, ಸುನೀತಾ ಮಾಳವದಕರ, ಚಂದ್ರಕಲಾ ಕೊಟಬಾಗಿ, ರೂಪಾ ಚೌಧರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net