ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

BJP protests against the state government
Published on

ಮಡಿಕೇರಿ:

ಬಿತ್ತನೆ ಬೀಜ ಮತ್ತು ರಸಗೊಬ್ಬರ ಬೆಲೆ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದಲ್ಲಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಎದುರು ಜಮಾಯಿಸಿದ ರೈತ ಮೋರ್ಚಾದ ಪ್ರಮುಖರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ ವರ್ಷದ ಬರಗಾಲದಿಂದ ರೈತರು ಸಂಕಷ್ಟದಲ್ಲಿ ಇದ್ದಾರೆ. ಈ ಬಾರಿ ಉತ್ತಮ ಮಳೆ ಆಗುವ ನೀರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಅನ್ನದಾತರು ಬೇಸಾಯಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಬಿತ್ತನೆ ಬೀಜ ದುಬಾರಿ ಆಗಿದೆ. ರಸಗೊಬ್ಬರವೂ ರೈತರ ಕೈಗೆಟಕುವಂತೆ ಇಲ್ಲ. ರಾಜ್ಯದಲ್ಲಿ ರೈತರ ಸಂಕಷ್ಟದ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ. ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ವಕ್ತಾರ ಮಹೇಶ್ ಜೈನಿ, ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ತಳೂರು ಕಿಶೋರ್ ಕುಮಾರ್, ರಾಬೀನ್ ದೇವಯ್ಯ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net