ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

20ark1
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಅರಕಲಗೂಡಿನಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
Published on

ಅರಕಲಗೂಡು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ತಾಲೂಕು ಘಟಕದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅನಕೃ ವೃತ್ತ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಇಂಧನ ಬೆಲೆ ಏರಿಕೆ ಕ್ರಮವನ್ನು ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಜನಸಾಮಾನ್ಯರು ತಮ್ಮ ದಿನನಿತ್ಯ ಜೀವನದಲ್ಲಿ ಉಪಯೋಗಿಸುವ ವಸ್ತುಗಳಲ್ಲಿ ಪೆಟ್ರೋಲ್, ಡೀಸೆಲ್ ಒಂದಾಗಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ದಿಢೀರ್ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ತಕ್ಷಣವೇ ಬೆಲೆ ಏರಿಕೆಯ ಆದೇಶವನ್ನು ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಪಿ.ಟಿ.ಕೇಶವೇಗೌಡ, ಲೋಕೇಶ್, ಎಚ್. ಮಾದೇಶ್, ವಿಶ್ವನಾಥ, ಪುನೀತ್ ಮಹಾದೇವಪ್ಪ , ಪರಮೇಶ, ವರುಣ, ದರ್ಶನ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net