ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

1sdp2
Published on

ಸಿದ್ದಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕಳೆದ ಎರಡು ವರ್ಷದಿಂದ ಯಾವುದೇ ಹೊಸಮನೆ ಮಂಜೂರು ಆಗಿಲ್ಲ. ಈಗಾಗಲೇ ಇದ್ದ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ನೀತಿ ಹಾಗೂ ಭ್ರಷ್ಟಾಚಾರ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 229 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿಯಂದ ಪ್ರತಿಭಟನೆ ನಡಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಹೇಳಿದರು.

ತಾಲೂಕಿನ ತಾರೇಹಳ್ಳಿ ಕಾನಸೂರು ಗ್ರಾಪಂ ಎದುರು ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಆಡಳಿತ ಹೇಗಿದೆ ಎನ್ನುವುದನ್ನು ಅವರದೇ ಪಕ್ಷದ ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ. ತಾನು ಮೂರು ಬಾರಿ ಮನೆ ಹಂಚಿಕೆಗಾಗಿ ಪಟ್ಟಿ ಮಾಡಿ ಕೊಟ್ಟರೂ ಮನೆ ಬಂದಿಲ್ಲ. ರೊಕ್ಕ ಕೊಟ್ಟವರಿಗೆ ಮನೆ ಕೊಟ್ಟಿದ್ದಾರೆ ಎಂದು ಗಂಬೀರ ಆರೋಪ ಮಾಡಿರುವುದು ಇದಕ್ಕೆ ಸಾಕ್ಷಿ ಆಗಿದೆ. ಸ್ವಪಕ್ಷದ ಶಾಸಕರೇ ಸರ್ಕಾರದ ಧೋರಣೆ ಹಾಗೂ ಮಂತ್ರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.

ಗ್ರಾಪಂ ಮಾಜಿ ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ, ಮಾಜಿ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ತಾಪಂ ಮಾಜಿ ಸದಸ್ಯ ಮಹಾಬಲೇಶ್ವರ ಹೆಗಡೆ, ಗ್ರಾಪಂ ಸದಸ್ಯರಾದ ವೀರಭದ್ರ, ಮಾಲಿನಿ ನಾಯ್ಕ, ಪ್ರಮುಖರಾದ ಬಲರಾಮ ನಾಮಧಾರಿ, ಗಣೇಶ ನಾಯ್ಕ, ಲೋಕೇಶ ಭಟ್ಟ, ನರಸಿಂಹ ಹೆಗಡೆ, ನಾಗರಾಜ ನಾಯ್ಕ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net