ರೈತ ಉತ್ಪಾದಕರ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗದ ಹಣ: ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

BJP protests against the state government in Mysore
Published on

ಮೈಸೂರು: ರೈತ ಉತ್ಪಾದಕರ ಸಂಸ್ಥೆಗಳಿಗೆ ನೀಡಬೇಕಾಗಿರುವ ಬಾಕಿ ಹಣ ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.

ರೈತ ಉತ್ಪಾದಕರ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರ್ಕಾರ 180 ಕೋಟಿ ರೂ. ಗಳನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್, ಬೀರಪ್ಪಗೌಡ, ನಗರಾಧ್ಯಕ್ಷ ದೇವರಾಜ್, ತಾಲೂಕು ಅಧ್ಯಕ್ಷ ರಾಜೇಶ್ ಗೌಡ, ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪರಶುರಾಮಪ್ಪ, ಅಲ್ಪಸಂಖ್ಯಾತರ ಮೋರ್ಚಾ ರಾಜ್ಯ ಕಾರ್ಯದರ್ಶಿ ಪ್ರಭಾಕರ್ ಜೈನ್, ಬಿಜೆಪಿ ಮಾಜಿ ಜಿಲ್ಲಾ ವಕ್ತಾರ ಡಾ. ವಸಂತ್ ಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net