ಹೊಸಮನೆ ಮಂಜೂರಾತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

SDP BJP PROTEST
Published on

ಸಿದ್ದಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕಳೆದ ಎರಡು ವರ್ಷದಿಂದ ಯಾವುದೇ ಹೊಸಮನೆ ಮಂಜೂರಾಗಿಲ್ಲ. ಈಗಾಗಲೇ ಇದ್ದ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ನೀತಿ ಹಾಗೂ ಭ್ರಷ್ಟಾಚಾರ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 229 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಹೇಳಿದರು.

ತಾಲೂಕಿನ ತಾರೇಹಳ್ಳಿ ಕಾನಸೂರು ಗ್ರಾಪಂ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಆಡಳಿತ ಹೇಗಿದೆ ಎನ್ನುವುದನ್ನು ಅವರದೇ ಪಕ್ಷದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ತಾನು ಮೂರು ಬಾರಿ ಮನೆ ಹಂಚಿಕೆಗಾಗಿ ಪಟ್ಟಿ ಮಾಡಿ ಕೊಟ್ಟರೂ ಮನೆ ಬಂದಿಲ್ಲ. ರೊಕ್ಕ ಕೊಟ್ಟವರಿಗೆ ಮನೆ ಕೊಟ್ಟಿದ್ದಾರೆ. ಎಂದು ಗಂಭೀರ ಆರೋಪ ಮಾಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಸ್ವಪಕ್ಷದ ಶಾಸಕರೇ ಸರ್ಕಾರದ ಧೋರಣೆ ಹಾಗೂ ಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.

ಗ್ರಾಪಂ ಮಾಜಿ ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ, ಮಾಜಿ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ತಾಪಂ ಮಾಜಿ ಸದಸ್ಯ ಮಹಾಬಲೇಶ್ವರ ಹೆಗಡೆ, ಗ್ರಾಪಂ ಸದಸ್ಯರಾದ ವೀರಭದ್ರ, ಮಾಲಿನಿ ನಾಯ್ಕ, ಪ್ರಮುಖರಾದ ಬಲರಾಮ ನಾಮಧಾರಿ, ಗಣೇಶ ನಾಯ್ಕ, ಲೋಕೇಶ ಭಟ್ಟ, ನರಸಿಂಹ ಹೆಗಡೆ, ನಾಗರಾಜ ನಾಯ್ಕ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net