

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮುಡಾ ಹಗರಣದಲ್ಲಿ ಭಾರಿ ಭ್ರಷ್ಟಚಾರವೆಸಗಿರುವುದು ಬಯಲಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಬಿಜೆಪಿ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ಮಾತನಾಡಿ, ಸಮಾಜವಾದಿ, ಅಹಿಂದಾವಾದಿ ಎಂಬ ಮುಖವಾಡ ಧರಿಸಿ ಕೋಟಿಗಟ್ಟಲೇ ಹಣವನ್ನು ಲೂಟಿ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ಜನರ ಕಣ್ಣಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ದೂರಿದರು.
ಸಿದ್ದರಾಮಯ್ಯ ಅವರ ಭಾರಿ ಭ್ರಷ್ಟಾಚಾರ ಬಯಲಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶಿದ್ದರೂ ಮುಖ್ಯಮಂತ್ರಿ ಸ್ಥಾನ ಗಟ್ಟಿಯಾಗಿ ಹಿಡಿದಿಟ್ಟುಕೊಂಡಿದ್ದಾರೆ. ಕುರ್ಚಿ ಆಸೆ ಹಾಗೂ ಹಗರಣಗಳ ಸರಮಾಲೆ ಹಾಕಿಕೊಂಡ ಮುಖ್ಯಮಂತ್ರಿಗಳು ಪರಿಶಿಷ್ಟರ ಹಣಕ್ಕೆ ಕನ್ನಹಾಕಿ ಜನತೆಗೆ ವಿಷಉಣಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷವು ಸಂವಿಧಾನದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರೆ ನೈತಿಕವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಪ್ರಕರಣ ಎದುಸಬೇಕು. ಅವರು ಹಿಂದೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಇಂಥ ಸ್ಥಿತಿಯಲ್ಲಿದ್ದಾಗ ಕೂಡಲೇ ರಾಜೀನಾಮೆ ಸಲ್ಲಿಸಲಿ ಎಂದು ಒತ್ತಾಯಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಕುತ್ತು ಸಂಭವಿಸಿದಾಗ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ ಎಂದು ದೂರಿದರು.
ಸಿದ್ದರಾಮಯ್ಯ ಅನೇಕ ದಶಕಗಳ ಕಾಲ ರಾಜಕೀಯದಲ್ಲಿ ತೊಡಗಿಸಿಕೊಂಡÀ ಕಾರಣ ಸ್ಥಾನಕ್ಕೆ ಗೌರವಿಸಿ ರಾಜೀನಾಮೆ ಸಲ್ಲಿಸಬೇಕು. ಇದನ್ನು ಮೀರಿ ಬಂಡತನದಿAದ ಮುಂದುವರೆದ್ದಲ್ಲಿ ಕಾನೂನಿನ ಪ್ರಕಾರ ಬಂಧನಕ್ಕೆ ಒಳಪಡಿಸುವ ಕಾಲ ಸನ್ನಿಹಿತವಾಗಲಿದೆ. ಕೂಡಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ದಿನಂಪ್ರತಿ ರಾಜ್ಯಾದ್ಯಂತ ಬಿಜೆಪಿ ಹೋರಾಟ ರೂಪಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ನಗರ ಘಟಕ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಮಾತನಾಡಿ, ಭ್ರಷ್ಟಚಾರ ಹಣೆಪಟ್ಟಿ ಹೊತ್ತಿರುವ ಮುಖ್ಯಮಂತ್ರಿಗಳು ಸ್ಥಾನ ಕಳೆದುಕೊಳ್ಳುವ ಮುನ್ನವೇ ಪದತ್ಯಾಗಗೊಳಿಸಿ ಸಂವಿಧಾನಕ್ಕೆ ಗೌರವ ಸಲ್ಲಿಸಬೇಕು ಎಂದರು.
ಅಹಿAದಾ, ಬಡವರು, ದೀನದಲಿತರ ಉದ್ದಾರವೆಂಬ ಸಿದ್ದರಾಮಯ್ಯ ಅವರ ನಾಟಕೀಯ ಮುಖವಾಡ ಕಳಚಿಬಿದ್ದಿದೆ. ಸಿಎಂ ಸ್ಥಾನಕ್ಕೆ ಮರ್ಯಾದೆ, ಗೌರವದಿಂದ ರಾಜೀನಾಮೆ ಸಲ್ಲಿಸಬೇಕು. ಅತಿಆಸೆಯಿಂದ ಕುರ್ಚಿಗೆ ಅಂಟಿಕೊAಡರೆ ಕಾನೂನು ಕಟ್ಟಳೆ ಮುಖಾಂತರ ಸ್ಥಾನದಿಂದ ಕೆಳಗಿಳಿಸಬೇಕಾಗುತ್ತದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಎಚ್.ಲೋಕೇಶ್ ಮಾತನಾಡಿ, ಬಡವರು, ದೀನದಲಿತರ ಅಭಿವೃಧ್ದಿ ಒತ್ತು ಕೊಡುವನೆಂಬ ಮಾತು ನೀಡಿ ಪರಿಶಿಷ್ಟ ಜಾತಿ, ಪಂಗಡದ ಕೋಟ್ಯಂತರ ಹಣವನ್ನು ನೆರೆ ರಾಜ್ಯದ ಚುನಾವಣೆ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಈ ನಡುವೆ ಮುಡಾ ಹಗರಣದಲ್ಲಿ ಹಣವನ್ನು ಲೂಟಿ ಮಾಡಿರುವುದು ಸಾಬೀತಾಗಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್, ನಗರ ಅಧ್ಯಕ್ಷೆ ಪವಿತ್ರ ಮಧುಬಂಡಿ, ಜಿಲ್ಲಾ ಉಪಾಧ್ಯಕ್ಷ ಪ್ರೇಮ್‌ಕುಮಾರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಓಬಿಸಿ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ಪ್ರೇಮ್‌ಕುಮಾರ್, ವಕ್ತಾರ ಹಿರೇಮಗಳೂರು ಪುಟ್ಟ ಸ್ವಾಮಿ, ಮುಖಂಡರಾದ ಕೌಶಿಕ್, ಬಸವರಾಜ್, ಜಯವರ್ಧನ್, ಸೋಮಶೇಖರ್, ನವೀನ್ ಮತ್ತಿತರರಿದ್ದರು.