ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

bjp strike New
Published on

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಇಲ್ಲಿನ ಅರವಿಂದ ನಗರದಲ್ಲಿರುವ ಮಹಾನಗರ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮುಡಾ ಹಗರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ, ಸಿದ್ದರಾಮಯ್ಯ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಶಿವು ಮೆಣಸಿನಕಾಯಿ, ಮಹೇಂದ್ರ ಕೌತಾಳ, ನಾರಾಯಣ ಜರತಾರಘರ, ದತ್ತಮೂರ್ತಿ ಕುಲಕರ್ಣಿ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಸುನೀಲ ಮೋರೆ, ವಕ್ತಾರ ರವಿ ನಾಯಕ, ರಾಜು ಜರತಾರಘರ, ಅಶೋಕ ವಾಲ್ಮೀಕಿ, ರಾಧಾಬಾಯಿ ಸಫಾರೆ, ಅಕ್ಕಮಹಾದೇವಿ ಹೆಗಡೆ, ಸುನಿತಾ ಚವ್ಹಾಣ, ಸಂಗೀತಾ ಬದ್ದಿ, ಪ್ರತಿಭಾ ಪವಾರ, ಶಿವನಗೌಡ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net