ಸಚಿವ ಜಮೀರ್ ಅಹ್ಮದ್ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ

New bjp strike new
Published on

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಾಜು ಕಾಳೆ ಮಾತನಾಡಿ, ಸಚಿವ ಜಮೀರ್ ಅಹ್ಮದ್ ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಕ್ತಾರ ರವಿ ನಾಯಕ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ದೂರಿದರು.

ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮತ್ತು ಕೃಷ್ಣ ಗಂಡಗಾಳೆಕರ ಮಾತನಾಡಿದರು.

ಪಾಲಿಕೆಯ ಸದಸ್ಯರಾದ ರಾಜಣ್ಣ ಕೊರವಿ, ಉಮೇಶ ಕೌಜಗೇರಿ, ಬೀರಪ್ಪ ಖಂಡೇಕರ, ಚಂದ್ರಿಕಾ ಮೇಸ್ತ್ರಿ, ಪ್ರಮುಖರಾದ ರಾಮನಗೌಡ ಶೆಟ್ಟನಗೌಡ್ರು, ಸಿದ್ದು ಮೊಗಲಿಶೆಟ್ಟರ, ತೋಟಪ್ಪ ನಿಡಗುಂದಿ, ಅಕ್ಕಮಹಾದೇವಿ ಹೆಗಡೆ, ಸುಮಾ ಶಿವನಗೌಡ್ರು, ಅರ್ಚನಾ ಕೆ., ಇಂದಿರಾ ಚವ್ಹಾಣ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net