ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

bjp protest
Published on

ಮೈಸೂರು: ಹಿಂದುಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

‘ಹಿಂದು’ ಎಂಬುದು ಅಶ್ಲೀಲ ಪದ ಎಂದು ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸ ಬೇಕು. ಪದೇ ಪದೆ ಹಿಂದು ಧರ್ಮದ ಬಗ್ಗೆ ಅವಹೇಳನ ಮಾಡುತ್ತಿರುವ ಸತೀಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಶಾಸಕ ಎಲ್. ನಾಗೇಂದ್ರ, ಬಿಜೆಪಿ ರಾಜ್ಯ ವಕ್ತಾರ ಎಂ. ಮಹೇಶ್, ಉಪಾಧ್ಯಕ್ಷ ಎಂ. ರಾಜೇಂದ್ರ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net