

ಮೈಸೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡಿರುವು ದನ್ನು ಖಂಡಿಸಿ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ನಿಗಮದಲ್ಲಿ ನಡೆದ ಅವ್ಯವಹಾರ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಗಮದಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವುದನ್ನು ಚಂದ್ರಶೇಖರ್ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಚಂದ್ರಶೇಖರನ್ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬಕ್ಕೆ ಭದ್ರತೆ ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಎಸ್‌ಟಿ ಮೋರ್ಚಾ ನಗರಾಧ್ಯಕ್ಷ ಪಡುವಾರಹಳ್ಳಿ ಎಂ. ರಾಮಕೃಷ್ಣ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಹುಣಸೂರು ಪ್ರಭಾಕರ್, ಶ್ರೀಧರ್ ಬೆಟ್ಟ, ರಾಜು ಮಾರ್ಕೆಟ್, ನಾರಾಯಣ ಲೋಲಪ್ಪ, ಹಿನಕಲ್ ಚಂದ್ರು, ಗೋಕುಲಂ ರಂಗಸ್ವಾಮಿ ನಾಯಕ, ನಾಗ, ನಂದೀಶ್ ನಾಯಕ, ವಿಜಯ ನಾಯಕ, ಗಂಗಾಧರ ಹಾಗೂ ಇತರರು ಪಾಲ್ಗೊಂಡಿದ್ದರು.