ಬಿಜೆಪಿ ಸಾಮರ್ಥ್ಯ ಮತ್ತೊಮ್ಮೆ ಸಾಬೀತು

joshi MP
Published on

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ತನ್ನ ಸಾಮರ್ಥ್ಯ ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಈ ಗೆಲುವಿಗೆ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಯನ್ನು ನನಗೆ ವಹಿಸಲಾಗಿತ್ತು. ಅಲ್ಲಿ ಕಾಂಗ್ರೆಸ್​ನ ದುರಾಡಳಿತದ ಬಗ್ಗೆ ಜನರಿಗೆ ತಿಳಿಸಿದ್ದೇವು. ಅಲ್ಲಿಯ ಮತದಾರರು ಕಾಂಗ್ರೆಸ್​ನ ಸುಳ್ಳು ಭರವಸೆಗಳನ್ನು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್​ಎಸ್ ದುರಾಡಳಿತದ ಪರಿಣಾಮ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಸಾಮಾನ್ಯ ಗೆಲುವು ಅಲ್ಲ. ಮಧ್ಯಪ್ರದೇಶದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದೇವೆ. ರಾಜಸ್ಥಾನದಲ್ಲಿ ಸಂಪೂರ್ಣ

ಬಹುಮತದೊಂದಿಗೆ ಜಯಭೇರಿ ಬಾರಿಸಿದ್ದೇವೆ. ಛತ್ತೀಸ್​ಗಢದಲ್ಲಿ ಕೂಡ ಬಿಜೆಪಿ ಗೆಲುವು ಅದ್ಭುತವಾದುದು. ತೆಲಂಗಾಣದಲ್ಲಿ ಕಳೆದ ಬಾರಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ಈ ಬಾರಿ ಎರಡಂಕಿಯ ಸಾಧನೆ ಮಾಡಿದ್ದೇವೆ. ಮತ ಗಳಿಕೆ ಪ್ರಮಾಣ ಶೇ 14ರಿಂದ 15ರಷ್ಟಿದೆ. ಇದು ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಸ್ಪಷ್ಟಪಡಿಸುತ್ತದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ಗೆ ಭವಿಷ್ಯವಿಲ್ಲ ಎಂದೂ ಜೋಶಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net