ಹಾಲಿನ ಪ್ರೋತ್ಸಾಹಧನ ಬಿಡುಗಡೆಗೆ ಒತ್ತಾಯ: ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

BJP Raita Morcha protest mandya
Published on

ಮಂಡ್ಯ: ಹಾಲು ಉತ್ಪಾದಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹ ಧನವನ್ನು ರಾಜ್ಯಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸರ್‌ಎಂವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದ್ದರು. ಇದರಿಂದ ಸುಮಾರು ರಾಜ್ಯದ 26 ಲಕ್ಷ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು ಎಂದರು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ, ರಾಜ್ಯಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಇಂದ್ರೇಶ್, ಇಂಡುವಾಳು ಸಚ್ಚಿದಾನಂದ, ಶ್ರೀಧರ್, ಸಿದ್ದರಾಜುಗೌಡ, ಶಿವಕುಮಾರ್ ಆರಾಧ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net