

ಮಡಿಕೇರಿ: ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧ ತಾಲೂಕಿನ ತಹಸೀಲ್ದಾರ್ ಕಚೇರಿ ಮುಂಭಾಗ ಸೆ.೮ರಂದು ಏಕಕಾಲಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ನಗರ ಮತ್ತು ಗ್ರಾಮಾಂತರ, ವಿರಾಜಪೇಟೆ ಮಂಡಲ, ಸೋಮವಾರಪೇಟೆ ಮಂಡಲದ ವತಿಯಿಂದ ಆಯಾಯ ತಾಲೂಕಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ರೈತ ಮೋರ್ಚಾದ ಮಂಡಲ ಅಧ್ಯಕ್ಷ ಪ್ರಕಾಶ್ ಬೆಳ್ಯಪ್ಪ, ಮಡಿಕೇರಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಅನಂತ್, ರೈತ ಮೋರ್ಚಾದ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ಉಪಸ್ಥಿತರಿದ್ದರು.