ರಸಗೊಬ್ಬರ ಪೂರೈಸುವಲ್ಲಿ ವಿಫಲ, ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

bjp protest rasagobbara
ವಿಜಯಪುರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಅರುಣ ಶಹಾಪುರ, ಈರಣ್ಣ ರಾವೂರ ಮತ್ತಿತರರಿದ್ದಾರೆ.
Published on

ವಿಜಯಪುರ: ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರಿಗೆ ಸಕಾಲಕ್ಕೆ ರಸಗೊಬ್ಬರ ಪೂರೈಸುವಂತೆ ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಸುಳ್ಳು ಭರವಸೆ ಕೊಟ್ಟು ಅಧೀಕಾರಕ್ಕೆ ಬಂದ ರಾಜ್ಯ ಸರ್ಕಾರ, ಇದೀಗ ರೈತರನ್ನು ತುಳಿಯುತ್ತಿದೆ. ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಸಕಾಲಕ್ಕೆ ರಸಗೊಬ್ಬರ ಪೂರೈಸದೆ ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಾಲ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಆದರೆ ರಾಜ್ಯ ಸರ್ಕಾರದ ಮಾಡಿರುವ ಸಾಲ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುವಂಥದ್ದಾಗಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದೆ ಎಂಬದು ಅರಿವಿದ್ದರೂ ಮುಂದಾಲೋಚನೆ ಮಾಡದೇ ರೈತರಿಗೆ ರಸಗೊಬ್ಬರ ಕೊಡದೇ ಇರುವ ರಾಜ್ಯದ ಅಶಕ್ತ ಕಾಂಗ್ರೆಸ್ ಸರ್ಕಾರ ಏನೇ ಕೇಳಿದರೂ ಕೇಂದ್ರದ ಕಡೆಗೆ ಬೊಟ್ಟು ತೋರಿಸುತ್ತಿದೆ. ಉತ್ತಮ ಆಡಳಿತ ನೀಡುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ರಾಜೀನಾಮೆಗೆ ಕೊಡಬೇಕೆಂದು ಆಗ್ರಹಿಸಿದರು.

ರಸಗೊಬ್ಬರಕ್ಕಾಗಿ ಕೇಂದ್ರದಕ್ಕೆ ಪತ್ರ ಬರೆದು ಅವರು ಕೊಡದೇ ಇದ್ದರೆ ಅವರ ವಿರುದ್ದ ದೋಷಣೆ ಮಾಡುವ ಸಿಎಂ ಸಿದ್ಧರಾಮಯ್ಯ ಹೀನ ರಾಜಕಾರಣ ನಡೆಸಿ ಕೇಂದ್ರದಿಂದ ರಸಗೊಬ್ಬರ ಬರುತ್ತಿಲ್ಲವೆಂದು ಮೊಸಳೆ ಕಣ್ಣಿರು ಹಾಕುತ್ತಿದ್ದಾರೆ. ಈ ಹಂಗಾಮಿಗೆ ಆಗುವಷ್ಟು ರಸಗೊಬ್ಬರ ಈಗಾಗಲೇ ರಾಜ್ಯಕ್ಕೆ ಬಂದಿದ್ದರೂ ಅದನ್ನು ಸರಿಯಾಗಿ ರೈತರಿಗೆ ಹಂಚದೇ ಕಾಳಸಂತೆಯಲ್ಲಿ ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಮುಖಂಡರಾದ ಸಂಜೀವ ಐಹೊಳೆ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಸಂಜಯ ಪಾಟೀಲ, ಸಾಬು ಮಾಶ್ಯಾಳ, ಉಮೇಶ ವಂದಾಲ, ಮಹೇಂದ್ರ ನಾಯಕ, ಛಾಯಾ ನುಸೇನವರ, ಭಾರತಿ ಭುಯ್ಯರ, ಭರತ ಕೋಳಿ, ಚಿದಾನಂದ ಛಲವಾದಿ, ಸಂಗಮೇಶ ಉಕ್ಕಲಿ, ಭರತ ಕೋಳಿ, ಮಲ್ಲಿಕಾರ್ಜುನ ಕಿವಡೆ, ಮಲ್ಲು ಕಲಾದಗಿ, ರವಿಕಾಂತ ಬಗಲಿ, ಜಗದೀಶ ಪಂಪಣ್ಣವರ, ಸಿದ್ದು ಮಕಣಾಪೂರ, ರಾಮಚಂದ್ರ ಚವಾಣ್, ಬಸವರಾಜ ಹಳ್ಳಿ, ರಾಹುಲ ಜಾಧವ, ಸಂಗಮೇಶ ಉಕ್ಕಲಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net