ಉದ್ಯೋಗ ಸೃಷ್ಟಿಸುವತ್ತ ಬಿಜೆಪಿ ಗಮನ ಹರಿಸಲಿ

mla belur gopalkrishan
Published on

ಶಿವಮೊಗ್ಗ: ಬಿಜೆಪಿಯು ಧರ್ಮ, ಪಾಕಿಸ್ತಾನ ಬಗ್ಗೆ ಗಮನ ಹರಿಸದೆ ಉದ್ಯೋಗ ಸೃಷ್ಟಿಸುವತ್ತ ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶವ್ಯಾಪ್ತಿ ನಿರುದ್ಯೋಗ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯದ ಸಂಸದರು ಗಮನ ಕೊಡುತ್ತಿಲ್ಲ. ಉದ್ಯೋಗ ಸೃಷ್ಟಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು ಎಂದರು. ರಾಜ್ಯದಲ್ಲಿ ಜಾತಿ ಗಣತಿ ಮುಕ್ತವಾಗಿ ನಡೆಯುತ್ತಿದ್ದು, ಎಲ್ಲರೂ ಒಪ್ಪಿಕೊಂಡಿದ್ದಾರೆ. ಶಿಕ್ಷಕರು ಈಗಾಗಲೇ ಸಮೀಕ್ಷೆಯಲ್ಲಿ ತೊಡಗಿಕೊಂಡಿದ್ದು, ಅವರಿಗೆ ಸಹಕಾರ ನೀಡಬೇಕು ಎಂದರು. ಸಚಿವ ಸಂಪುಟ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ನಮ್ಮ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ನನಗೆ ಕೊಟ್ಟರೆ ಖುಷಿಯಿಂದ ಕೆಲಸ ಮಾಡುತ್ತೇನೆ. ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net