ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರ

20240404_124524
Published on

ಮೂಗೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಹಿಸಲಾಗದೆ ಸುಳ್ಳು ಸುದ್ದಿ ಹಬ್ಬಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಅಪಪ್ರಚಾರದ ಮಾಡುತ್ತಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೂಗೂರು ಎಂ.ಡಿ. ಬಸವರಾಜು ಆರೋಪಿಸಿದರು.


ಮೂಗೂರಿನ ಶ್ರೀ ತ್ರಿಪುರ ಸುಂದರಿ ಅಮ್ಮ ನವರ ದೇವಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗ್ರಾಮದ ವಾಲ್ಮೀಕಿ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಮೂಗೂರು ಹೋಬಳಿ ಮಟ್ಟದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಪಕ್ಷಭೇದ ಮರೆತು ಸರ್ವ ಜನಾಂಗದ ಏಳಿಗೆಗೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಬಡವರ ಬದುಕನ್ನು ಉತ್ತಮವಾಗಿಸಲು ಪಣ ತೊಟ್ಟಿದೆ. ಹಾಗೆಯೇ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡುವ ಮೂಲಕ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ವಾರ್ಡ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಬೇಕು ಎಂದರು.


ಚಾ.ನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ತಂದೆಗೆ ನೀವೆಲ್ಲ ಆಶೀರ್ವದಿಸಿ ಪ್ರಚಂಡ ಬಹುಮತದಿಂದ ಗೆಲ್ಲಿಸಿದ್ದೀರಿ, ನಾನು ಸುಮಾರು 30 ವರ್ಷಗಳಿಂದಲೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಕೆಲವು ಅವಕಾಶದಿಂದ ವಂಚಿತನಾದ ನನ್ನನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಜಯಶೀಲನನ್ನಾಗಿಸಬೇಕೆಂದು ಮುಖಂಡರಲ್ಲಿ ಮನವಿ ಮಾಡಿದರು.


ಎಂ.ಎಂ.ಬಸವಣ್ಣ, ದೇವಾನಂದ್, ಎಂ.ಬಿ.ಸಾಗರ್, ಗುರುಸಿದ್ದಪ್ಪ, ಹೊಸಪುರ ಕೆ .ಮಲ್ಲು, ಎಂ.ರಾಜು, ಎಂ.ಎಂ.ಜಗದೀಶ್, ಮಹಾದೇವಸ್ವಾಮಿ, ಮಹಾದೇವಮೂರ್ತಿ, ಸಿದ್ದರಾಜು, ಕೃಷ್ಣಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net