8ರಂದು ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ: ಎಲ್.ಆರ್.ಮಹದೇವಸ್ವಾಮಿ ಮಾಹಿತಿ

bjp
Published on

ಮೈಸೂರು: ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಫೆ.8ರಂದು ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಹಾಲಿ, ಮಾಜಿ ಶಾಸಕರು, ಸಂಸದರು, ಮಾಜಿ ಸಚಿವರು , ಜಿಲ್ಲಾ ಮಟ್ಟದಿಂದ ರಾಜ್ಯ ಹಾಗೂ ರಾಷ್ಟ್ರಕ್ಕೆ ಆಯ್ಕೆಯಾಗಿರುವ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಸೇರಿದಂತೆ 718 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ನಡೆಯುವ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದು, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ್ ಸಿಂಹ ಹಾಗೂ ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net